ಐಐಟಿ/ಐಐಎಂ/ಐಐಎಸ್ ಸಿ/ಎನ್ಐಟಿಯಂತಹ ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ವಿದ್ಯಾರ್ಥಿಗಳ ಪ್ರೋತ್ಸಾಹ ಧನವನ್ನು 1 ಲಕ್ಷ ರೂ.ನಿಂದ 2 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪಿಯುಸಿಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಪಡೆದರೂ ನೀಟ್ ಪ್ರವೇಶಾತಿ ಪರೀಕ್ಷೆಯಲ್ಲಿ ಮ್ಯಾನೇಜ್ ಮೆಂಟ್ ಕೋಟಾದಡಿ ಎಂಬಿಬಿಎಸ್ ಸೀಟು ಪಡೆದ ಪರಿಶಿಷ್ಟ ಜಾತಿಯ ಮಕ್ಕಳಿಗೆ 25 ಲಕ್ಷ ರೂ. ಕಾಲೇಜು ಶುಲ್ಕವಾಗಿ ಸರ್ಕಾರ ಪಾವತಿಸುತ್ತದೆ.
ಪಿಯುಸಿಯಲ್ಲಿ ಶೇ.95 ಕ್ಕಿಂತ ಹೆಚ್ಚು ಅಂಕ ಪಡೆದರೂ ನೀಟ್ ಪ್ರವೇಶಾತಿ ಪರೀಕ್ಷೆಯಲ್ಲಿ ಸರ್ಕಾರೀ ಕೋಟಾದಡಿ ಸೀಟು ಸಿಗದೇ ಮ್ಯಾನೇಜ್ ಮೆಂಟ್ ಕೋಟಾಡದಿ ಸೀಟು ಪಡೆದ ವಿದ್ಯಾರ್ಥಿಗಳು ಶುಲ್ಕ ಪಾವತಿಸಲು ಕಷ್ಟವಾಗುತ್ತಿತ್ತು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಹದೇವಪ್ಪ ಮತ್ತು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ಪ್ರೋತ್ಸಾಹ ಧನ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.