ನಡೆಯದ ರಥೋತ್ಸವ: ಉಸ್ತುವಾರಿ ಸಚಿವರ ವಿರುದ್ಧ ಹೆಚ್ಚಿದ ಆಕ್ರೋಶ
ಭಾನುವಾರ, 16 ಜೂನ್ 2019 (19:19 IST)
ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಜನರು.
ಶಿಥಿಲಗೊಂಡಿರುವ ಚಾಮರಾಜೇಶ್ವರ ರಥದ ಕಾಮಗಾರಿಯ ವಿಳಂಬ ನೀತಿ ವಿರೋಧಿಸಿ ಕರ್ನಾಟಕ ಸೇನಾಪಡೆ ಚಾಮರಾಜನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಜಿಲ್ಲಾಧಿಕಾರಿಗಳ ಕಛೇರಿ ಎದುರು ಧರಣಿ ನಡೆಸಿದ ಪ್ರತಿಭಟನಾಕಾರರು, ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಚಾ.ರಂ.ಶ್ರೀನಿವಾಸಗೌಡ, ಇತಿಹಾಸ ಪ್ರಸಿದ್ಧ ಚಾಮರಾಜೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವದ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಸುಮಾರು ತಿಂಗಳುಗಳೇ ಕಳೆದರೂ ಅಭಿವೃದ್ಧಿ ಕಾರ್ಯ ಪ್ರಾರಂಭಗೊಂಡಿಲ್ಲ ಎಂದು ಆರೋಪಿದರು.
ಪ್ರತಿ ವರ್ಷ ಆಷಾಡ ಮಾಸದಲ್ಲಿ ಚಾಮರಾಜೇಶ್ವರ ಬ್ರಹ್ಮ ರಥೋತ್ಸವ ಆಚರಣೆ ನಡೆದುಕೊಂಡು ಬಂದಿದೆ. ಈ ಜಾತ್ರೆಗೆ ಜಿಲ್ಲೆ ಹಾಗೂ ಬೇರೆ ಜಿಲ್ಲೆಗಳಿಂದಲೂ ನವ ದಂಪತಿಗಳು ಆಗಮಿಸುತ್ತಿದ್ದರು. ಇದರಿಂದ ಈ ಜಾತ್ರೆ ಪ್ರಸಿದ್ದಿ ಪಡೆದಿತ್ತು. ಕಳೆದ ಮೂರು ವರ್ಷಗಳಿಂದ ಚಾಮರಾಜೇಶ್ವರ ರಥೋತ್ಸವ ನಡೆಯದಿರುವುದು ಭಕ್ತಾದಿಗಳಲ್ಲಿ ನಿರಾಸೆ ಉಂಟು ಮಾಡಿದೆ. ಹಾಗೇಯೇ ಚಾಮರಾಜೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿ ಕಳಪೆ ಗುಣ ಮಟ್ಟದಿಂದ ಕೂಡಿದ್ದು ಜಿಲ್ಲಾಧಿಕಾರಿಗಳು ಖುದ್ದು ಪರಿಶೀಲನೆ ನಡೆಸಬೇಕೆಂದು ಅವರು ಆಗ್ರಹಿಸಿದರು.