ಗೃಹಲಕ್ಷ್ಮಿಯಿಂದ ಸರ್ಕಾರಕ್ಕೂ ಆದಾಯ

ಮಂಗಳವಾರ, 29 ಆಗಸ್ಟ್ 2023 (14:46 IST)
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆ  ಅನುಷ್ಠಾನಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ ಜಿಲ್ಲೆಗಳನ್ನು ಒಳಗೊಂಡಂತೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನಾಲ್ಕು ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮವನ್ನು ಬೆಳಗಾವಿಯಿಂದ ಮೈಸೂರಿಗೆ ಸ್ಥಳಾಂತರ ಮಾಡಿರುವುದರ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ. ಮಹಿಳೆಯರು ಈ ಹಣವನ್ನು ವಿವಿಧ ಉದ್ದೇಶಗಳಿಗೆ ಬಳಕೆ ಮಾಡುವುದರಿಂದ ಸರ್ಕಾರಕ್ಕೂ ಆದಾಯ ಬರಲಿದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿ ಆಗಲಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ