ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ: ಡಿಜಿಪಿಗೆ ದೂರು ನೀಡಿದ ಬಿಜೆಪಿ

Sampriya

ಶನಿವಾರ, 18 ಮೇ 2024 (19:21 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ಬಿಜೆಪಿ ನಿಯೋಗ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಮನವಿ ಸಲ್ಲಿಸಿತು.

ಮಾಜಿ ಸಿಎಂ, ಸಂಸದ ಡಿ.ವಿ. ಸದಾನಂದ ಗೌಡ ಅವರ ನೇತೃತ್ವದ ನಿಯೋಗವು ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿತು.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಮಾಜಿ ಸಿಎಂ ಸದಾನಂದ ಗೌಡ ಅವರು,   ಇಂದು ಕರ್ನಾಟಕದ ಬಿಜೆಪಿ  ನಿಯೋಗದೊಂದಿಗೆ ರಾಜ್ಯ ಪೊಲೀಸ್ ಮಹಾನಿರ್ದೇಶಕ  ಅಲೋಕ್  ಮೋಹನ್‌ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು , ಅಫರಾದ ಪ್ರಕರಣಗಳು ಹೆಚ್ಚಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗೆ ಇದ್ದರು.

ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕೊಲೆ, ದರೋಡೆ ಪ್ರಕರಣಗಳು ಹೆಚ್ಚಿದ್ದು ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ