ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿದೆ. ಇದರಿಂದ ಉದ್ಯಾನ ನಗರಿ ನಮ್ಮ ಮೆಟ್ರೋ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುತ್ತದೆ ಎಂದು ಊಹಿಸಲಾಗಿತ್ತು. ಆದರೆ ಇದರ ತದ್ವಿರುದ್ಧವಾಗಿದ್ದು ಮೆಟ್ರೋ ಪ್ರಯಾಣಿಕರ ಸಂಖ್ಯೆ ಏರಿಕೆಯಾಗಿದೆ. ಶಕ್ತಿ ಯೋಜನೆಯಿಂದ ಬಿಎಂಟಿಸಿ ಬಸ್ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪ್ರಯಾಣ ಮಾಡಲು ಆರಂಭಿಸಿದರು. ಇದರಿಂದ ಬಸ್ಗಳು ರಶ್ ಆದವು. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯಮಿ ಹಾಗೂ ಪುರುಷರು ಕಿಕ್ಕಿರಿದು ತುಂಬಿದ್ದ ಬಸ್ಗಳಲ್ಲಿ ಪ್ರಯಾಣಿಸಲು ಇಚ್ಚಿಸದೆ ಮೆಟ್ರೋದಲ್ಲಿ ಪ್ರಯಾಣಿಸುತಿರೊದರಿಂದ ನಮ್ಮ ಮೆಟ್ರೋ ಕೂಡ ಲಾಭದಲ್ಲಿ ಲಾಭದಾಯಕವಾಗಿ ನಡಿಯುತ್ತಿದೆ.
ಹೌದು ಮೇ ತಿಂಗಳಲ್ಲಿ ಸರಾಸರಿ 5.6 ಲಕ್ಷ ಪ್ರಯಾಣಿಕರು ಪ್ರತಿದಿನ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದರು. ಶಕ್ತಿ ಯೋಜನೆ ಜಾರಿ ನಂತರ ಪ್ರಯಾಣಿಕರ ಸಂಖ್ಯೆ ದಿನಕ್ಕೆ 6.1 ಲಕ್ಷಕ್ಕೆ ಏರಿಕೆಯಾಗಿದೆ. ಅಂದರೇ ಪ್ರಯಾಣಿಕರ ಸಂಖ್ಯೆ 40,000ಕ್ಕೆ ಏರಿಕೆಯಾಗಿದೆ. ಜುಲೈನಲ್ಲಿ ಶುಕ್ರವಾರದವರೆಗೆ ದೈನಂದಿನ ಪ್ರಯಾಣಿಕರ ಸಂಖ್ಯೆ 6.1 ಲಕ್ಷ ಗಡಿ ದಾಟಿದೆ. ಇದರ ಹಿಂದಿನವಾರ ಜುಲೈ 15 ರಂದು 6.7 ಲಕ್ಷ ಜನರು ಪ್ರಯಾಣಿಸುವ ಮೂಲಕ ಸರ್ವಕಾಲಿಕ ದಾಖಲೆಯಾಗಿದೆ. ಕೆಲವು ದಿನಗಳಿಂದ ಪ್ರಯಾಣಿಕರ ಸಂಖ್ಯೆ 6.6 ಲಕ್ಷದ ಗಡಿ ದಾಟಿದೆ. ಇದರಿಂದ ದಿನಕ್ಕೆ 15 ಲಕ್ಷ ಆದಾಯ ಹರಿದು ಬರುತ್ತಿದೆ ಎಂದು ಎಂದು ಬಿಎಂಆಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.ಶಕ್ತಿ ಯೋಜನೆ ಇಂದಾಗಿ ನಮ್ಮ ಮೆಟ್ರೋಗೆ ಹೆಚ್ಚಿನ ಸಂಖ್ಯೆಯಲ್ಲಿ ಜನ ಹರಿದು ಬರುತ್ತಿರೋದು ಬಿಎಂಆರ್ ಸಿಎಲ್ ಶಕ್ತಿ ಬಂದಂತಾಗಿದೆ ಎಂದು ಹರ್ಷ ವ್ಯಕ್ತಪಡಿಸಿದೆ.