ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

Sampriya

ಶುಕ್ರವಾರ, 4 ಜುಲೈ 2025 (20:41 IST)
ಬೆಂಗಳೂರು: ಈಚೆಗೆ ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಮೈಸೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಗೆ ಹೆಚ್ಚುವರಿ ತಜ್ಞರ ವೈದ್ಯರ ನಿಯೋಜನೆಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ರಾಜ್ಯಾದ್ಯಂತ ಹೃದಯಘಾತ ಪ್ರಕರಣಗಳು ಹೆಚ್ಚುತ್ತಿವೆ. ವಿಶೇಷವಾಗಿ ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿವೆ. 

ಆತಂತಕದಲ್ಲಿ ಮೈಸೂರಿನ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.

 ಹೀಗಾಗಿ ಈ ಆಸ್ಪತ್ರೆಗೆ ಇತರ ಜಿಲ್ಲೆಗಳಿಂದ ತುರ್ತಾಗಿ ತಜ್ಞ ವೈದ್ಯರನ್ನು ನಿಯೋಜನೆ ಮಾಡುವ ಕುರಿತು ತಾನು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿ ಈ ಸೂಚನೆ ನೀಡಿದ್ದಾರೆ ಎಂದು ಶಾಸಕ ದಿನೇಶ್ ಗೂಳಿಗೌಡ ತಿಳಿಸಿದ್ದಾರೆ.

ಶಾಸಕ ದಿನೇಶ್ ಗೂಳಿಗೌಡ ಅವರು 30 ರಿಂದ 50 ವರ್ಷ ವಯಸ್ಸಿನವರಲ್ಲಿ ಹೃದಯಾಘಾತ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿರುವುದು ಮತ್ತು ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ರೋಗಿಗಳ ಸಂಖ್ಯೆ ಸಾಮರ್ಥ್ಯಕ್ಕಿಂತ ದುಪ್ಪಟ್ಟಾಗಿರುವ (ದಿನಕ್ಕೆ 700ರ ಬದಲಿಗೆ 1500-2000) ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. 



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ