ವೃದ್ಧರ ಕೋವಿಡ್ ಪರೀಕ್ಷೆ ಹೆಚ್ಚಿಸಿ?

ಬುಧವಾರ, 19 ಜನವರಿ 2022 (08:03 IST)
ಎಲ್ಲ ಜಿಲ್ಲೆಗಳಲ್ಲಿ ಪಾಸಿಟಿವಿಟಿ ದರ ಹೆಚ್ಚಿರುವುದರಿಂದ ಅನ್ಯರೋಗ (ಕೋ-ಮಾರ್ಬಿಡಿಟಿ) ಇರುವವರನ್ನು ಗುರುತಿಸಿ, ಹೋಮ್ ಐಸೋಲೇಶನ್ನಲ್ಲಿರುವವರಿಗೆ ಟೆಸ್ಟ್ ಮಾಡಿ ಚಿಕಿತ್ಸೆ ನೀಡಬೇಕು.
 
ಕೋ-ಮಾರ್ಬಿಡಿಟಿ ಇರುವವರು ಹಾಗೂ 60 ವರ್ಷಗಳಿಗೂ ಮೇಲ್ಪಟ್ಟವರಿಗೆ ಪರೀಕ್ಷೆಗಳನ್ನು ಹೆಚ್ಚಿಸಬೇಕು ಮತ್ತು ಔಷಧಿ ಒದಗಿಸಬೇಕು ಎಂದು ತಿಳಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ಮಕ್ಕಳ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸೆಗೆ ಹೆಚ್ಚು ಒತ್ತು ನೀಡಬೇಕು. ಮುಂಚೂಣಿ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಅಭಿಯಾನ ಕೈಗೊಳ್ಳಬೇಕು. ಲಸಿಕೆ ಪಡೆದು 90 ದಿನ ಪೂರೈಸಿರುವವರ ಪಟ್ಟಿ ತಯಾರಿಸಿ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಲಸಿಕೆ ಕಾರ್ಯಕ್ರಮದ ಮೇಲ್ವಿಚಾರಣೆಯ ಜವಾಬ್ದಾರಿ ನೀಡಬೇಕು ಎಂದು ಹೇಳಿದರು. 

ಕರ್ನಾಟಕದಲ್ಲಿ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಪ್ರಕರಣಗಳು ಹೆಚ್ಚಿದ್ದರೂ ಕೋವಿಡ್ ಪರಿಸ್ಥಿತಿ ನಿಭಾಯಿಸುವಲ್ಲಿ ಯಶಸ್ವಿಯಾಗಿದ್ದೇವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ