ರಾಜ್ಯದ ಮಕ್ಕಳಲ್ಲಿ ಹೆಚ್ಚಾದ `ವೈರಲ್ ಫೀವರ್' : ಡಾ.ಸುಧಾಕರ್ ಹೇಳಿದ್ದೇನು?

ಶುಕ್ರವಾರ, 17 ಸೆಪ್ಟಂಬರ್ 2021 (14:40 IST)
ಬೆಂಗಳೂರು : ಕೊರೊನಾ ವೈರಸ್ ಬೆನ್ನಲ್ಲೇ ರಾಜ್ಯದ ಮಕ್ಕಳಲ್ಲಿ ವೈರಲ್ ಫೀವರ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಇದು ಸೀಸನಲ್ ಫೀವರ್ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಲಾಕ್ ಡೌನ್ ಇದ್ದಿದ್ದರಿಂದ ಮಕ್ಕಳು ಮನೆಯೊಳಗೇ ಇದ್ದರು. ಈಗ ರಾಜ್ಯದಲ್ಲಿ ಎಲ್ಲಾ ಚಟುವಟಿಕೆಗಳು ಪುನಾರರಂಭವಾಗಿದೆ. ಹೀಗಾಗಿ ಮಕ್ಕಳಿಗೆ ಸೀಸನಲ್ ಫೀವರ್ ಶುರುವಾಗಿದೆ. ಈ ಬಾರಿ ವೈರಲ್ ಫೀವರ್ ಕಡೆ ಗಮನಹರಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಆರೋಗ್ಯ ಇಲಾಖೆ ಸೂಕ್ಷ್ಮವಾಗಿ ಪರೀಕ್ಷೆ ಮಾಡಿ, ಟೆಸ್ಟಿಂಗ್ ಮಾಡುವಂತೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಆರೋಗ್ಯ ಇಲಾಖೆಯೊಂದಿಗೆ ಚರ್ಚೆ ಮಾಡಿ ಆಸ್ಪತ್ರೆಗೆ ಬೆಡ್ ಸಮಸ್ಯೆ ಬಗೆಹರಿಸಲಾಗುವುದು. ಎಲ್ಲಾ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಸಿಗುವಂತಾಗಬೇಕು. ತಜ್ಞರು ಈಗಾಗಲೆ ಕೊರೊನಾ 3 ನೇ ಅಲೆ ಬಗ್ಗೆ ವರದಿ ನೀಡಿದ್ದಾರೆ. ಈ ಹಿಂದೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಮಾಹಿತಿ ನೀಡಿದ್ದು, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಜೊತೆಗೆ ಚರ್ಚೆ ಮಾಡಲಾಗುವುದು ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ