ರಾಜ್ಯದಲ್ಲಿ ಹೆಚ್ಚುತ್ತಿರುವ ಗೋ ಹತ್ಯೆ: ಸೂಕ್ತ ತನಿಖೆಗೆ ಗೃಹಮಂತ್ರಿ ಪರಮೇಶ್ವರ್ ಖಡಕ್ ಸೂಚನೆ

Sampriya

ಸೋಮವಾರ, 20 ಜನವರಿ 2025 (20:28 IST)
Photo Courtesy X
ಬೆಂಗಳೂರು: ರಾಜ್ಯದಲ್ಲಿಈಚೆಗೆ ನಡೆದ ಗೋಹತ್ಯೆಗಳ ಹಿಂದೆ ಬೇರೆ ರೀತಿಯ ಪ್ರಚೋದನೆ ಇದೆಯೇ ಎಂಬ ಬಗ್ಗೆ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿರುವುದಾಗಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಅವರು ಇಂದು ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ ಗೋ ಹತ್ಯೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈಚೆಗೆ ನಡೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಕ್ರಮ ಕಯಗೊಳ್ಳುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.  

ಈ ರೀತಿಯ ಕ್ರೂರ ಮನಸ್ಥಿತಿಯಿರುವವರನ್ನು ಗುರುತಿಸಿ, ಕೃತ್ಯದ ಹಿಂದೆ ಬೇರೆ ಯಾರಾದ್ದಾದರೂ ಪ್ರಚೋದನೆ ಇದೆಯೇ?, ವೈಯಕ್ತಿಕವಾಗಿ ಕೃತ್ಯ ಎಸಗುತ್ತಿದ್ದಾರೆಯೇ ಅಥವಾ ಸಂಘಟನೆಗಳಿವೆಯೇ ಎಂಬೆಲ್ಲ ವಿಚಾರಗಳನ್ನು ತನಿಖೆ ನಡೆಸುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ತಿಳಿಸಿದರು.

ಇನ್ನೂ ಬೀದರ್‌ನಲ್ಲಿ ಎಟಿಎಂ ವಾಹನದ ಮೇಲೆ ದಾಳಿ ನಡೆಸಿ ಒಬ್ಬರನ್ನು ಹತ್ಯೆ ಮಾಡಿ, ಮತ್ತೊಬ್ಬರನ್ನು ಗಾಯಗೊಳಿಸಿ 83 ಲಕ್ಷ ದರೋಡೆ ಮಾಡಿದ ಪ್ರಕರಣದಲ್ಲಿ ಮಾಹಿತಿ ಕಲೆಹಾಕಲಾಗಿದೆ. ಶೀಘ್ರವಾಗಿ ಆರೋಪಿಗಳನ್ನು ಬಂಧಿಸಲಾಗುವುದು ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ