ನಿಷೇಧಿತ ಅಪ್ಲಿಕೇಶನ್‌ಗಳ ಪಟ್ಟಿಯಲ್ಲಿ ಸ್ವೀಟ್ ಸೆಲ್ಫಿ ಎಚ್‌ಡಿ, ಬ್ಯೂಟಿ ಕ್ಯಾಮೆರಾ - ಸೆಲ್ಫಿ ಕ್ಯಾಮೆರಾ, ಗರೆನಾ ಫ್ರೀ ಫೈರ್ - ಇಲ್ಯುಮಿನೇಟ್, ವಿವಾ ವಿಡಿಯೋ ಎಡಿಟರ್, ಟೆನ್ಸೆಂಟ್ ಎಕ್ಸ್‌ರಿವರ್, ಆನ್‌ಮಿಯೋಜಿ ಅರೆನಾ, ಆಪ್‌ಲಾಕ್ ಹಾಗೂ ಡ್ಯುಯಲ್ ಸ್ಪೇಸ್ ಲೈಟ್ ಸೇರಿವೆ.
ಕಳೆದ ವರ್ಷ ಜೂನ್‌ನಲ್ಲಿ ರಾಷ್ಟ್ರದ ಸಾರ್ವಭೌಮತ್ವ ಹಾಗೂ ಭದ್ರತೆಗೆ ಬೆದರಿಕೆಯನ್ನು ಉಲ್ಲೇಖಿಸಿ ಭಾರತವು ಟಿಕ್‌ಟಾಕ್, ವೀಚಾಟ್ ಹಾಗೂ ಹೆಲೋನಂತಹ ವ್ಯಾಪಕವಾಗಿ ಬಳಸಲಾಗುವ ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳು ಸೇರಿದಂತೆ 59 ಚೀನೀ ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ತಿಳಿಸಿದೆ.