ದೇಶದಲ್ಲಿ 46,700 ಪಾಸಿಟಿವ್, 2 ತಿಂಗಳಲ್ಲಿ ಗರಿಷ್ಠ ಜಿಗಿತ

ಶನಿವಾರ, 28 ಆಗಸ್ಟ್ 2021 (15:03 IST)
ದೇಶದಲ್ಲಿ ಕಳೆದ 24 ಗಂಟೆಯಲ್ಲಿ 46,700 ಕೊರೊನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 509 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದು ಕಳೆದ 2 ತಿಂಗಳಲ್ಲೇ ದಾಖಲಾದ ಗರಿಷ್ಠ ಸೋಂ
ಕು ಪ್ರಕರಣಗಳಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ದೇಶದಲ್ಲಿ ಒಂದು ದಿನದಲ್ಲಿ 31,374 ಮಂದಿ ಗುಣಮುಖಿತರಾಗಿದ್ದು ಒಟ್ಟಾರೆ ಗುಣಮುಖಿತರ ಸಂಖ್ಯೆ 3,18,52,802ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,59,775ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಒಟ್ಟಾರೆ ಒಟ್ಟಾರೆ ಸೋಂಕಿತರ ಸಂಖ್ಯೆ 3,26,49,947ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 4,37,370ಕ್ಕೆ ಜಿಗಿತ ಕಂಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ