ವಿಶೇಷ ಚೇತನ ಮಗುವಿಗೆ ಸೌಲಭ್ಯ ನೀಡದೇ ಅಪಮಾನ ಮಾಡಿದ ಇಂಡಿಗೋ ವಿಮಾನ ಸಂಸ್ಥೆಗೆ ಕೇಂದ್ರ ಸರಕಾರ 5 ಲಕ್ಷ ರೂ. ದಂಡ ವಿಧಿಸಲಾಗಿದೆ.
ರಾಂಚಿಯಲ್ಲಿ ವಿಶೇಷ ಚೇತನ ಮಗುವಿಗೆ ಪ್ರವೇಶ ನಿರಾಕರಿಸಿದ್ದೂ ಅಲ್ಲದೇ ಅವರನ್ನು ಇಂಡಿಗೋ ವಿಮಾನಯಾನ ಸಂಸ್ಥೆ ಸಿಬ್ಬಂದಿ ನಡೆಸಿಕೊಂಡ ರೀತಿ ಸರಿಯಲ್ಲ ಎಂದು ಹೇಳಿರುವ ಕೇಂದ್ರ ವಿಮಾನಯಾನ ನಿರ್ದೇಶನಾಲಯ 5 ಲಕ್ಷ ರೂ. ದಂಡ ವಿಧಿಸಿದೆ.
ವಿಮಾನದಲ್ಲಿ ಪ್ರಯಾಣ ಮಾಡಲು ಅವಕಾಶ ಇಲ್ಲದ ಸಂದರ್ಭದಲ್ಲಿ ಕೂಡ ವಿಮಾನ ಸಂಸ್ಥೆ ಪರಿಸ್ಥಿತಿಯನ್ನು ಮತ್ತಷ್ಟು ಉತ್ತಮ ರೀತಿಯಲ್ಲಿ ನಡೆಸಿಕೊಳ್ಳಬಹುದಿತ್ತು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.