ಕರ್ನಾಟಕದಲ್ಲಿ ಲಸಿಕೆ ಪಡೆದ 13,768 ಮಂದಿಯಲ್ಲಿ ಸೋಂಕು ಪತ್ತೆ!
ಶನಿವಾರ, 21 ಆಗಸ್ಟ್ 2021 (08:49 IST)
ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಲಸಿಕೆ ಪಡೆದವರಲ್ಲಿ ಮತ್ತೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಕುರಿತಂತೆ ಮಹತ್ವದ ಮಾಹಿತಿಯೊಂದು ಬಹಿರಂಗಗೊಂಡಿದೆ.
ಕರ್ನಾಟಕದಲ್ಲಿ ಕೊವಿಡ್ ಲಸಿಕೆ ಪಡೆದ ಒಟ್ಟು 13,768 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಅಂಕಿ ಅಂಶಗಳು ತಿಳಿಸಿದ್ದು, ಲಸಿಕೆ ಪಡೆದ ಒಟ್ಟು ಸೋಂಕಿತರ ಪೈಕಿ 13,768 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಇದರಲ್ಲಿ ಕೊವಿಶೀಲ್ಡ್ ಲಸಿಕೆ ಪಡೆದ 11,150 ಜನರು ಹಾಗೂ ಕೊವ್ಯಾಕ್ಸಿನ್ ಲಸಿಕೆ ಪಡೆದ 2,618 ಜನರು ಸೋಂಕಿಗೆ ತುತ್ತಾಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ.
ಮೊದಲ ಡೋಸ್ ಕೊವಿಶೀಲ್ಡ್ ಲಸಿಕೆ ಪಡೆದವರಲ್ಲಿ 9,030 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದರೆ, ಎರಡೂ ಡೋಸ್ ಲಸಿಕೆ ಕೊವಿಶೀಲ್ಡ್ ಲಸಿಕೆ ಪಡೆದ 2,120 ಜನರಿಗೆ ಕೊವಿಡ್ ದೃಢಪಟ್ಟಿದೆ. ಮೊದಲ ಡೋಸ್ ಕೊವ್ಯಾಕ್ಸಿನ್ ಲಸಿಕೆ ಪಡೆದಿರುವ 2,216 ಜನರು ಸೋಂಕಿತರಾಗಿದ್ದು, ಎರಡೂ ಡೋಸ್ ಕೊವ್ಯಾಕ್ಸಿನ್ ಪಡೆದ 402 ಜನರಿಗೆ ಸೋಂಕು ಪತ್ತೆಯಾಗಿದೆ ಎಂದು ತಿಳಿದುಬಂದಿದೆ.