ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಅಧಿಕಾರಕ್ಕೆ ಅಂಟಿಕೊಂಡುವ ಕೂರುವ ವ್ಯಕ್ತಿಯಲ್ಲ. ಪ್ರಕರಣ ಕುರಿತಂತೆ ಈಗಾಗಲೇ ತನಿಖೆ ನಡೆಯುತ್ತಿದೆ. ನಿಷ್ಪಕ್ಷಪಾತ ತನಿಖೆಯ ನಂತರ ಸತ್ಯಾಸತ್ಯತೆ ಹೊರ ಬರಲಿದೆ. ಅಲ್ಲಿಯವರೆಗೆ ನಿರಪರಾಧಿಗಳನ್ನು ಅಪರಾಧಿಯಾಗಿ ಮಾಡಬೇಡಿ ಎಂದು ಮನವಿ ಮಾಡಿದರು.