ಬೆಂಗಳೂರು ಸಂಚಾರ ಪೆÇಲೀಸರ ಅಧಿಕೃತ ಫೇಸ್?ಬುಕ್ ಖಾತೆಯಲ್ಲಿ ಲೈವ್ ಬಂದ ಅವರು ಸಾರ್ವಜನಿಕರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿ ಈ ವಿಷಯ ತಿಳಿಸಿದರು. ಮತ್ತಷ್ಟು ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪೆÇಲೀಸರು ಸಾರ್ವಜನಿಕರ ಜತೆ ಕಟುವಾಗಿ ವರ್ತಿಸಬಾರದು. ಕಾನೂನು ಉಲ್ಲಂಘಿಸಿದವರೊಂದಿಗೆ ಸೌಜನ್ಯದಿಂದಲೇ ವರ್ತಿಸಿ ದಂಡ ವಿಧಿಸಬೇಕು. ಒಂದುವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಸೂಕ್ತ ಕಾನೂನುಕ್ರಮ ಜರುಗಿಸಬೇಕು. ಸೌಜನ್ಯದಿಂದ ವರ್ತಿಸುವ ಕುರಿತು ಪೆÇಲೀಸರಿಗೆ ಅದರಲ್ಲೂ ಹೊಸದಾಗಿ ನೇಮಕಗೊಂಡವರಿಗೆ ಸಾಫ್ಟ್ ? ಸ್ಕಿಲ್ಸï? ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಪೆÇಲೀಸರು ಸುಖಾಸುಮ್ಮನೆ ತಡೆದು ಪರಿಶೀಲಿಸುತ್ತಾರೆ ಎಂದು ಸಾರ್ವಜನಿಕರೊಬ್ಬರು ದೂರಿದ್ದಕ್ಕೆ, ಸಾಮಾನ್ಯವಾಗಿ ಪೆÇಲೀಸರು ಎರಡು ರೀತಿಯ ತಪಾಸಣೆ ಮಾಡುತ್ತಾರೆ ಎಂದ ಅವರು, ಕಣ್ಣಿಗೆ ಕಾಣಿಸುವಂಥ ಸಂಚಾರ ನಿಯಮ ಉಲ್ಲಂಘನೆ ಇರದಿದ್ದರೆ ತಡೆಯಬಾರದು. ಆದರೆ ಕೆಲವೊಂದು ವಿಶೇಷ ಸಂದರ್ಭಗಳಲ್ಲಿ ಹಾಗೂ ಹಳೆಯ ಸಂಚಾರ ಉಲ್ಲಂಘನೆ ಪ್ರಕರಣಗಳನ್ನು ಪತ್ತೆ ಮಾಡುವ ಸಲುವಾಗಿ ತಡೆದು ತಪಾಸಣೆ ನಡೆಸಲಾಗುತ್ತದೆ ಎಂದು ತಿಳಿಸಿದರು.