ನಗರದ ವಿ.ವಿ ಪುರಂನಲ್ಲಿರುವ ತಿಂಡಿ ಬೀದಿಯನ್ನು ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ವಿನೂತನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, 2023ರ ಆಗಸ್ಟ್ ತಿಂಗಳಲ್ಲಿ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ದಕ್ಷಿಣ ವಲಯ ಆಯುಕ್ತರಾದ ಜಯರಾಮ್ ರಾಯಪುರ ರವರು ಹೇಳಿದ್ರು.
ವಿವಿ ಪುರಂ ತಿಂಡಿ ಬೀದಿಯನ್ನು ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿವಿ ಪುರಂನ ತಿಂಡಿ ಬೀದಿಯಲ್ಲಿ ಸಮರ್ಪಕ ಮೂಲಭೂತ ಸೌಕರ್ಯಗಳನ್ನು ಒಗದಿಸುವ ನಿಟ್ಟಿನಲ್ಲಿ ಹಾಗೂ ಜನರನ್ನು ಆಕರ್ಷಿಸುವ ನಿಟ್ಟಿನಲ್ಲಿ ಸಜ್ಜನ್ ರಾವ್ ವೃತ್ತ ಮತ್ತು ಮಿನರ್ವ ವೃತ್ತದ ನಡುವೆ ಇರುವ ಸುಮಾರು 200 ಮೀಟರ್ ಉದ್ದದ ರಸ್ತೆಯನ್ನು ಸಮಗ್ರವಾಗಿ ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದೆಂದು ಹೇಳಿದರು.
ವಿ.ವಿ. ಪುರಂ ತಿಂಡಿಬೀದಿಯಲ್ಲಿ ಎಲ್ಲಾ ವ್ಯಾಪಾರಿಗಳ ಸಹಯೋಗದೊಂದಿಗೆ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಸ್ಥಳದಲ್ಲಿದ್ದ ಸಮಸ್ಯೆಗಳನ್ನೆಲ್ಲಾ ಬಗೆಹರಿಸಿಕೊಂಡು ಕಾಮಗಾರಿಯನ್ನು ನಡೆಸಲಾಗುತ್ತಿದ್ದು, ಒಂದು ತಿಂಗಳೊಳಗಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ ನವೀಕರಣಗೊಂಡು ತಿಂಡಿ ಬೀದಿಯನ್ನು ಉದ್ಘಾಟನೆಗೊಳಿಸಲಾಗುವುದು ಎಂದು ಮಾನ್ಯ ಸ್ಥಳೀಯ ಶಾಸಕರಾದ ಶ್ರೀ ಉದಯ್ ಬಿ. ಗರುಡಾ ಚಾರ್ ರವರು ಹೇಳಿದ್ರು.