ಆ್ಯಂಬುಲೆನ್ಸ್ಗೆ GPS ಅಳವಡಿಸಿ - ಹೈಕೋರ್ಟ್
ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆ್ಯಂಬುಲೆನ್ಸ್ಗಳಿಗೆ GPS ವ್ಯವಸ್ಥೆಯನ್ನು ಅಳವಡಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ. ಈ ಸಂಬಂಧ ಭಾರತ್ ಪುನರುತ್ಥಾನ ಟ್ರಸ್ಟ್ ಸಲ್ಲಿಸಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ P.B. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಾಪೀಠ ಈ ಕುರಿತು ಆದೇಶಿಸಿದೆ. ವಿಚಾರಣೆ ವೇಳೆ ಸರ್ಕಾರಿ ವಕೀಲರು GPS ಅಳವಡಿಸಲಾಗಿದೆಯೇ ಅಥವಾ ಇಲ್ಲವೇ ಎಂಬುದರ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುವಂತೆ 2020ರ ಮಾರ್ಚ್ 4ರಂದು ಸಾರಿಗೆ ಮತ್ತು ಪ್ರಾದೇಶಿಕ ರಸ್ತೆ ಸುರಕ್ಷತಾ ಅಧಿಕಾರಿಗಳಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ನ್ಯಾಯಾಪೀಠಕ್ಕೆ ತಿಳಿಸಿದರು. ಇದನ್ನು ಪರಿಗಣಿಸಿದ ನ್ಯಾಯಾಪೀಠ ಆ್ಯಂಬುಲೆನ್ಸ್ಗಳ ತಡೆರಹಿತ ಸಂಚಾರಕ್ಕೆ ಅಗತ್ಯ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ GPS ಅಳವಡಿಸುವಂತೆ ರಾಜ್ಯದಲ್ಲಿನ ಆ್ಯಂಬುಲೆನ್ಸ್ ತಯಾರಿಕೆಗೆ ನಿರ್ದೇಶನ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದೆ.