ಮಂಡ್ಯ ಬದಲು ಈ ಕ್ಷೇತ್ರದಿಂದ ಸುಮಲತರಿಗೆ ಟಿಕೆಟ್ ನೀಡಲು ಕೈ ನಾಯಕರಿಂದ ಚಿಂತನೆ
ಶನಿವಾರ, 9 ಮಾರ್ಚ್ 2019 (06:46 IST)
ಬೆಂಗಳೂರು : ಮುಂಬರುವ ಲೋಕಸಭಾ ಚುನಾವಣೆಗೆ ಸುಮಲತ ಅಂಬರೀಶ್ ಅವರು ಮಂಡ್ಯ ಕ್ಷೇತ್ರದಿಂದ ಕಾಂಗ್ರೆಸ್ ಇಲ್ಲವೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುವುದಾಗಿ ಘೋಷಣೆ ಮಾಡಿದ್ದಾರೆ.
ಈಗಾಗಲೇ ಮಂಡ್ಯ ಕ್ಷೇತ್ರ ಜೆಡಿಎಸ್ ಗೆ ಬಿಟ್ಟು ಕೊಟ್ಟ ಹಿನ್ನಲೆಯಲ್ಲಿ ಸುಮಲತ ಅವರಿಗೆ ಕಾಂಗ್ರೆಸ್ ಟಿಕೇಟ್ ಇಲ್ಲ ಅಂತ ಮಾಜಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಆದ್ದರಿಂದ ಸುಮಲತ ಅವರ ಮುಂದಿನ ನಡೆ ಏನು ಎಂಬ ಬಗ್ಗೆ ಇದೀಗ ಎಲ್ಲರಲ್ಲೂ ಕೂತುಹಲ ಮೂಡಿದೆ.
ಈ ನಡುವೆ ಮಂಡ್ಯದ ಬದಲು ಸುಮಲತಾ ಅವರಿಗೆ ಮೈಸೂರಿನಿಂದ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷದಲ್ಲಿ ಈಗಾಗಲೇ ಮಾತುಕತೆ ನಡೆದಿದೆ ಎನ್ನಲಾಗಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸೂಚನೆ ನೀಡಿದ್ದು, ಹೇಗಾದ್ರು ಮಾಡಿ ಸುಮಲತ ಅವರ ಮನವೊಲಿಸುವಂತೆ ಹೇಳಿದ್ದಾರೆ ಎನ್ನಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.