ಚಾಮುಂಡಿಬೆಟ್ಟ ಭೂಕುಸಿತದ ದುರಸ್ಥಿ ಕಾರ್ಯ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ
ಗುರುವಾರ, 21 ಅಕ್ಟೋಬರ್ 2021 (21:18 IST)
ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿಬೆಟ್ಡದಲ್ಲಿ ಬೃಹತ್ ನಂದಿ ಪ್ರತಿಮೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ರಸ್ತೆ ಹಾನಿಗೀಡಾಗಿರುವುದು ದುರದೃಷ್ಟಕರ.
ಜಿಲ್ಲಾಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿ ಅವಲೋಕಿಸಿ ತುರ್ತು ಕ್ರಮ ಕೈಗೊಳ್ಳಬೇಕು. ಮುಂದಾಗಬಹುದಾದ ಅನಾಹುತ ತಪ್ಪಿಸಲು ಕೂಡಲೇ ಆ ರಸ್ತೆ ಸಂಚಾರವನ್ನು ಬಂದ್ ಮಾಡಿ, ದುರಸ್ಥಿ ಕಾರ್ಯವನ್ನು ಕೈಗೊಳ್ಳಬೇಕು.
ಆದಷ್ಟು ಶೀಘ್ರದಲ್ಲಿ ನಾನು ಬಂದು ಪರಿಶೀಲಿಸುತ್ತೇನೆ. ದುರಸ್ತಿ ಕಾರ್ಯವನ್ನು ಸಮರೋಪಾದಿಯಲ್ಲಿ ತೆಗೆದುಕೊಂಡು ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಬೇಕು ಎಂದು ಸೂಚಿಸಿದೆ