ಬಸವಣ್ಣನ ಪ್ರತಿಮೆಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು!

ಭಾನುವಾರ, 15 ಜನವರಿ 2017 (13:33 IST)
ವಿಶ್ವಗುರು ಬಸವಣ್ಣನ ಪ್ರತಿಮೆಗೆ ತವರು ಜಿಲ್ಲೆಯಲ್ಲಿಯೇ ಅವಮಾನ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ನಿಡೋಣಿ ಗ್ರಾಮದಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ನಿಡೋಣಿ ಗ್ರಾಮದಲ್ಲಿರುವ ಬಸವಣ್ಣನ ಆಶ್ವಾರೂಢ ಪ್ರತಿಮೆಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕ್ಕಿ ಅವಮಾನ ಮಾಡಿದ್ದಾರೆ. ಕಿಡಿಗೇಡಿಗಳನ್ನು ಬಂಧಿಸುವವರೆಗೂ ಚಪ್ಪಲಿ ಹಾರವನ್ನು ತೆಗೆಯಲು ಬಿಡುವುದಿಲ್ಲ ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದು, ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 
 
ಘಟನೆಯನ್ನು ಖಂಡಿಸಿ ಬಸವಣ್ಣನ ಜನ್ಮಸ್ಥಳ ಬಸವನ ಬಾಗೇವಾಡಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ರಾಷ್ಟ್ರೀಯ ಬಸವ ಸೈನ್ಯದ ಅಧ್ಯಕ್ಷ ಶಂಕರಗೌಡ ಪಾಟೀಲ್ ನೇತೃತ್ವದಲ್ಲಿ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಟೈಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. 
 
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸರು ಭೇಟಿ ನೀಡಿದ್ದು, ಕೂಡಲೇ ಕಿಡಿಗೇಡಿಗಳನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ