ಪಾಕಿಸ್ತಾನಕ್ಕೆ ಜೈಕಾರ ಎಂದಿದ್ದ ಆರೋಪಿಗಳ ತೀವ್ರ ವಿಚಾರಣೆ

geetha

ಮಂಗಳವಾರ, 5 ಮಾರ್ಚ್ 2024 (15:23 IST)
ಬೆಂಗಳೂರು :ಪಾಕಿಸ್ತಾನ್ ಜಿಂದಾಬಾದ್ ಘೋಷಣೆ  ಪ್ರಕರಣದಲ್ಲಿ ಬಂಧಿತರಾಗಿರುವ ಮೂವರು ಆರೋಪಿಗಳ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ. ಸೋಮವಾರ ರಾತ್ರಿ ಬಂಧಿತರಾಗಿರುವ ಆರೋಪಿಗಳನ್ನು ಕಬ್ಬನ್ ಪಾರ್ಕ್ ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ವಿಧಾನಸೌಧ ಠಾಣೆ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
 
ಸೋಮವಾರ ರಾತ್ರಿ ಬಂಧಿತರಾಗಿರುವ ಆರೋಪಿಗಳನ್ನು ಕಬ್ಬನ್ ಪಾರ್ಕ್  ಉಪ ವಿಭಾಗದ ಎಸಿಪಿ ಬಾಲಕೃಷ್ಣ ಹಾಗೂ ವಿಧಾನಸೌಧ ಠಾಣೆ ಇನ್ಸ್ ಪೆಕ್ಟರ್ ಕುಮಾರಸ್ವಾಮಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
 
ಮೊಹಮ್ಮದ್ ಶಫಿ ನಾಶಿಪುಡಿ, ಮುನಾವರ್ ಆಹ್ಮದ್ ಹಾಗೂ ಮೊಹಮ್ಮದ್ ಇಲ್ತಾಜ್ ಮೂವರನ್ನೂ ಸೋಮವಾರ ರಾತ್ರಿ ನ್ಯಾಯಾಧೀಶರ  ಮುಂದೆ ಹಾಜರುಪಡಿಸಿದ್ದ ಪೊಲೀಸರು ಎರಡು ದಿನ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಸಲ್ಲಿಸಿದ್ದರು. ಮಾ. 6 ರವರೆಗೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಮೊಹಮ್ಮದ್ ಶಫಿ ನಾಶಿಪುಡಿ ಹಾವೇರಿ ಜಿಲ್ಲೆ ಬ್ಯಾಡಗಿ ನಿವಾಸಿಯಾಗಿದ್ದರೆ, ಮುನಾವರ್‌ ಅಹ್ಮದ್‌ ಬೆಂಗಳೂರಿನ ಆರ್‌.ಟಿ. ನಗರದ ನಿವಾಸಿಯಾಗಿದ್ದಾನೆ. ದೆಹಲಿಯ ಇಲ್ತಾಸ್‌ ಗೂ ಇವರಿಬ್ಬರಿಗೂ ಪರಿಚಯವಿಲ್ಲ ಎಂದು ವಿಚಾರಣೆಯ ವೇಳೆ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ