ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ: ಮಾಧುಸ್ವಾಮಿ

ಮಂಗಳವಾರ, 7 ಡಿಸೆಂಬರ್ 2021 (12:03 IST)
ತುಮಕೂರು : ಓಮಿಕ್ರಾನ್ ಆತಂಕ ಹಿನ್ನೆಲೆಯಲ್ಲಿ ಜಿಲ್ಲೆಗೆ ಕೇರಳದಿಂದ ಬಂದವರ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇರಳದಿಂದ ಬಂದವರನ್ನು ಮನೆಯಲ್ಲೇ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ. ಹೆಚ್ಚು ಪ್ರಕರಣಗಳು ಕಂಡು ಬಂದರೆ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಸೂಚಿಸಲಾಗಿದೆ.
ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗದಂತೆ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ. ಪ್ರತಿ ತಾಲೂಕಾಸ್ಪತ್ರೆಯಲ್ಲೂ 500-600 ಆಕ್ಸಿಜನ್ ಸಾಂದ್ರಕಗಳಿವೆ. ಜೊತೆಗೆ ಪ್ರತಿ ತಾಲೂಕಿನಲ್ಲಿ 5-6 ಐಸಿಯು ಬೆಡ್ ಇದೆ ಎಂದರು.
ಈ ಬಾರಿ ಮಕ್ಕಳ ಪ್ರಕರಣ ಹೆಚ್ಚು ಕಂಡುಬರುವ ಸಾಧ್ಯತೆ ಇದೆ. ಹಾಗಾಗಿ 200 ಮಕ್ಕಳ ವೈದ್ಯರನ್ನು ಕರೆಸಿ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಚರ್ಚೆ ಮಾಡಲಾಗಿದೆ. ಐಸಿಯು ಬೆಡ್ ಸೇರಿದಂತೆ ಎಲ್ಲ ರೀತಿಯ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಮಕ್ಕಳ ಪ್ರಕರಣದಲ್ಲಿ ಡೆತ್ ರೇಟ್ ಕಡಿಮೆ ಇದೆ. ಹಾಗಾಗಿ ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಸೂಚಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ