ಬೆಂಗಳೂನಲ್ಲಿ ಅಂತಾರಾಷ್ಟ್ರೀಯ ಚಿತ್ರೋತ್ಸವ

ಬುಧವಾರ, 8 ಫೆಬ್ರವರಿ 2023 (08:43 IST)
ಪ್ರತಿಷ್ಠಿತ ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ಈ ವರ್ಷ ನಡೆಯುವುದು ಅನುಮಾನ ಎನ್ನಲಾಗಿತ್ತು.

ಚುನಾವಣೆ ನೀತಿಸಂಹಿತೆ ಹಾಗೂ ಇನ್ನೂ ಸರಕಾರ ಅನುದಾನ ಬಿಡುಗಡೆ ಮಾಡದೇ ಇರುವ ಕಾರಣದಿಂದಾಗಿ ಈ ವರ್ಷ ಚಿತ್ರೋತ್ಸವ ನಡೆಯುವುದರ ಬಗ್ಗೆ ಗೊಂದಲ ಮೂಡಿತ್ತು. ಆದರೆ, ಎಲ್ಲದಕ್ಕೂ ತೆರೆ ಎಳೆಯಲಾಗಿದೆ.

ಫೆಬ್ರವರಿಯಲ್ಲಿ ಫಿಲ್ಮೋತ್ಸವ ನಡೆಸದೇ ಮಾರ್ಚ್ ಕೊನೆಯ ವಾರದಲ್ಲಿ ಚಿತ್ರೋತ್ಸವ ನಡೆಸುವುದಾಗಿ ಅಕಾಡೆಮಿ ತಿಳಿಸಿದೆ.

14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನವನ್ನು ಬೆಂಗಳೂರಿನಲ್ಲಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಅನಾವರಣ ಮಾಡಿದರು.

ನಗರದ ಪದ್ಮನಾಭನಗರದಲ್ಲಿ ನಿನ್ನೆ ಸಂಜೆ ನಡೆದ ಸಮಾರಂಭದಲ್ಲಿ 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆಗೊಂಡಿದ್ದು, 2023 ಮಾರ್ಚ್ 23ರಿಂದ 30ರವರೆಗೆ ಚಿತ್ರೋತ್ಸವ ನಡೆಯಲಿದೆ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ