ಅಂತರ್ಜಾತಿ ವಿವಾಹ: ಯುವಕನ ಬರ್ಬರ ಹತ್ಯೆ

ಶನಿವಾರ, 21 ಮೇ 2022 (21:20 IST)
ಅಂತರ್ಜಾತಿ ವಿವಾಹವಾದ 21 ವರ್ಷದ ನೀರಜ್‌ಕುಮಾರ್​​ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಭಯಾನಕ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಕೊಲೆಯ ಹಿಂದೆ ಈತ ಮದುವೆಯಾದ ಯುವತಿ ಮನೆಯವರ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ. ಹೈದರಾಬಾದ್‌ನ ಜನನಿಬಿಡ ಪ್ರದೇಶವಾದ ಬೇಗಂ ಬಜಾರ್ ಪ್ರದೇಶದಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ..ಯುವಕ ತನ್ನ ಬೈಕ್‌ನಲ್ಲಿ ಬರುತ್ತಿದ್ದಾಗ ಬೈಕ್‌ ಅಡ್ಡಗಟ್ಟಿದ ಐವರು ದುಷ್ಕರ್ಮಿಗಳ ತಂಡ ಯುವಕನಿಗೆ ಚಾಕುವಿನಿಂದ ಹಲವು ಬಾರಿ ಇರಿದಿದ್ದಾರೆ. ನೀರಜ್‌ಕುಮಾರ್ ವರ್ಷದ ಹಿಂದೆ ಬೇರೆ ಜಾತಿಯ ಯುವತಿಯನ್ನು ಮದುವೆಯಾಗಿದ್ದ..ಈ ಕಾರಣಕ್ಕೆ ಕೊಲೆಯಾಗಿರಬಹುದು ಎಂಬ ಅನುಮಾನ ಕಾಡಿದೆ. ಪೊಲೀಸರು ಮೃತದೇಹವನ್ನು ಉಸ್ಮಾನಿಯಾ ಆಸ್ಪತ್ರೆಗೆ ರವಾನಿಸಿದ್ದು, ಹೆಚ್ಚಿನ ತನಿಖೆಗಾಗಿ ಅಪರಾಧ ನಡೆದ ಸ್ಥಳವನ್ನು ಪರಿಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ