ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಾಗಬೇಕು. ವೆಬ್‌ಸೈಟ್‌ನಲ್ಲಿನ ಆದೇಶ ಪ್ರತಿಯಿಂದಲೇ ಎಫ್‌ಐಆರ್ ಮಾಡಿಕೊಳ್ಳಬಹುದು. ಇವತ್ತೇ ಎಫ್‌ಐಆರ್ ದಾಖಲಾಗುತ್ತದೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಮೈಸೂರಿನಲ್ಲಿ ಗುರುವಾರ ಹೇಳಿದ್ದಾರೆ.
ಸಿಎಂ ಮೇಲಿನ ಮುಡಾ ಕೇಸ್‌ನಲ್ಲಿ ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ. ಹೀಗಾಗಿ, ವಿಚಾರಣೆ ಸಿಬಿಐಗೆ ಕೊಡಿ ಎಂದು ಹೈಕೋರ್ಟ್‌ಗೆ ಅರ್ಜಿ ಹಾಕುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಅಧೀನದಲ್ಲಿರುವ ಲೋಕಾಯುಕ್ತ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಹೀಗಾಗಿ ತನಿಖೆ ಜವಾಬ್ದಾರಿಯನ್ನು ಸಿಬಿಐಗೆ ಕೊಡಿ ಎಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ಮೈಸೂರಿನಲ್ಲಿ ತಿಳಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ತೀರ್ಪು ಹೊರಬೀಳುತ್ತಿದ್ದಂತೆ ಬಿಜೆಪಿ-ಜೆಡಿಎಸ್ ನಾಯಕರು ಮುಖ್ಯಮಂತ್ರಿಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ. ಅಲ್ಲಲ್ಲಿ ಪ್ರತಿಭಟನೆಗಳೂ ಜೋರಾಗಿದೆ.