ನೇಹಾ ಹತ್ಯೆ ಆರೋಪಿ ಫಯಾಜ್‌ನನ್ನು ವಶಕ್ಕೆ ಪಡೆದ ಸಿಐಡಿ ತಂಡ
ತನಿಖೆ ಶುರು ಮಾಡಿದ ಸಿಐಡಿ ಅಧಿಕಾರಿಗಳು: ಪ್ರಕರಣದ ಕುರಿತು ಪೊಲೀಸರಿಂದ ಎಲ್ಲ ಮಾಹಿತಿ ಮತ್ತು ತನಿಖೆ ಕಡತ ಪಡೆದ ಸಿಐಡಿ ಅಧಿಕಾರಿಗಳು ಆರೋಪಿ ವಶಕ್ಕೆ ಪಡೆಯುತ್ತಿದ್ದಂತೆ ಹೆಚ್ಚಿನ ತನಿಖೆ ಆರಂಭಿಸಲಿದ್ದಾರೆ ಎಂದು ತಿಳಿದು ಬಂದಿದೆ.
ತನಿಖೆ ಆರಂಭಿಸಿರುವ ಎಸ್‌ಪಿ ವೆಂಕಟೇಶ್ ನೇತೃತ್ವದ ತಂಡ ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಆರೋಪಿಯನ್ನು ತಮ್ಮ ವಶಕ್ಕೆ ನೀಡುವಂತೆ ಇಲ್ಲಿನ ಒಂದನೇ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.
ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಆರು ದಿನ ಆರೋಪಿಯನ್ನು ಸಿಐಡಿಗೆ ಒಪ್ಪಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ