ಕೊರೊನಾ ವೈರಸ್ ಹಾವಳಿಯಿಂದ ಮುಂದೂಡಲ್ಪಟ್ಟಿರುವ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು 2022 ರ ಫೆಬ್ರವರಿಯಲ್ಲಿ ಆಯೋಜಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಫೆಬ್ರವರಿ 9, 10 ಮತ್ತು 11ಕ್ಕೆ ಜಾಗತಿಕ ಹೂಡಿಕೆದಾರರ ಸಮಾವೇಶ ಮಾಡಲು ನಿರ್ಧಾರಿಸಲಾಗಿದೆ.
ರಾಜ್ಯದಲ್ಲಿ ಆಕ್ಸಿಜನ್ ಘಟಕ ಆರಂಭಿಸಲು ವಿಶೇಷ ಪ್ರೋತ್ಸಾಹ ನೀಡಲು ಒಪ್ಪಿಗೆ. 6 ಆಕ್ಸಿಜನ್ ಘಟಕ ಇದ್ದು, ಇದನ್ನು ಇನ್ನೂ ಹೆಚ್ಚಿಸಲು ತೀರ್ಮಾನ. ಘಡಕ ಸ್ಥಾಪಿಸುವವರಿಗೆ 25% ಕ್ಯಾಪಿಟಲ್ ಸಬ್ಸಿಡಿ ನೀಡಲು ನಿರ್ಧಾರ, ವಿದ್ಯುತ್ ಸುಂಕದಿಂದ ಮೂರು ವರ್ಷಗಳಿಗೆ ಪೂರ್ಣ ವಿನಾಯಿತಿ ನೀಡಲು ತೀರ್ಮಾನ. ಸ್ಟಾಂಪ್ ಡ್ಯೂಟಿಯಿಂದ ಸಂಪೂರ್ಣ ವಿನಾಯಿತಿ ನೀಡಲು ತೀರ್ಮಾನ