ಯುವ ಜನೋತ್ಸವದ ಲೋಗೋ, ಥೀಮ್ ರಚನೆ ಸ್ಪರ್ಧೆಗೆ ಆಹ್ವಾನ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ರೇಷ್ಮೆ, ಕ್ರೀಡಾ ಹಾಗೂ ಯುವಜನ ಸಬಲೀಕರಣ ಇಲಾಖೆಯ ಸಚಿವರಾದ ಡಾ.ನಾರಾಯಣಗೌಡ ಅವರು ತಿಳಿಸಿದರು.
ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಯುವಜನೋತ್ಸವದಲ್ಲಿ ದೇಶದ ಎಲ್ಲ ರಾಜ್ಯಗಳಿಂದ 7,500 ಕಲಾವಿದರು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ.
26ನೇ ರಾಷ್ಟ್ರೀಯ ಯುವಜನೋತ್ಸವ ಆಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಉನ್ನತಮಟ್ಟದ ಸಮಿತಿ ರಚಿಸಲಾಗಿದ್ದು, ಈಗಾಗಲೇ ಸಭೆ ಕೂಡ ನಡೆಸಲಾಗಿದೆ.