ಚುನಾವಣೆಗಾಗಿ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿದ್ದರಾಮಯ್ಯ

ಗುರುವಾರ, 7 ಸೆಪ್ಟಂಬರ್ 2023 (10:18 IST)
ಬೆಂಗಳೂರು : ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂತಹ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಧುಗಿರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದ ಸಂವಿಧಾನವನ್ನು 1949ರ ನವೆಂಬರ್ 26 ರಂದು ಅಂಗೀಕಾರ ಮಾಡಲಾಗಿದೆ. ಅಂದಿನಿಂದ ಭಾರತವನ್ನು ಇಂಡಿಯಾ ಎಂದೇ ಕರೆಯಲಾಗಿದೆ. ಈಗ ಬದಲಾವಣೆ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು.

ಸಂವಿಧಾನದ ಪೀಠಿಕೆಯಲ್ಲಿಯೂ ಭಾರತದ ಪ್ರಜೆಗಳಾದ ನಾವು ಎಂದೇ ಹೇಳಿದ್ದೇವೆ. ಈಗ ಭಾರತ ಎಂದು ಮರುನಾಮಕರಣ ಮಾಡುವ ಅಗತ್ಯವಿಲ್ಲ ಎಂದು ಅಭಿಪ್ರಾಯ ಪಟ್ಟರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ