ಸ್ಥಾಪನೆಯಾಗಲಿದೆ ಐಫೋನ್ ತಯಾರಿಕಾ ಘಟಕ, 1 ಲಕ್ಷ ಮಂದಿಗೆ ಉದ್ಯೋಗ

ಶುಕ್ರವಾರ, 3 ಮಾರ್ಚ್ 2023 (15:33 IST)
ಬೆಂಗಳೂರು : ಕೋವಿಡ್ ಬಳಿಕ ಚೀನಾ ಹಾಗೂ ಅಮೆರಿಕ ನಡುವೆ ಸಂಘರ್ಷ ಹೆಚ್ಚಾಗಿ, ಇದೀಗ ಆಪಲ್ ಕಂಪನಿ ತನ್ನ ತಯಾರಿಕಾ ಘಟಕವನ್ನು ಚೀನಾದಿಂದ ಭಾರತಕ್ಕೆ ಸ್ಥಳಾಂತರಿಸಲು ಮುಂದಾಗುತ್ತಿದೆ. ಆಪಲ್ನ ಉತ್ಪನ್ನಗಳನ್ನು ತಯಾರಿಸುವ ಕಂಪನಿಯಾಗಿರುವ ಫಾಕ್ಸ್ಕಾನ್ನ ಘಟಕ ಶೀಘ್ರವೇ ಬೆಂಗಳೂರಿನ ಸಮೀಪ ಸ್ಥಾಪನೆಯಾಗಲಿದೆ.
 
ವರದಿಗಳ ಪ್ರಕಾರ ಆಪಲ್ ಫೋನ್ಗಳನ್ನು ಸ್ಥಳೀಯವಾಗಿ ಉತ್ಪಾದಿಸುವ ಪಾಲುದಾರ ಕಂಪನಿ ಫಾಕ್ಸ್ಕಾನ್ ಟೆಕ್ನಾಲಜಿ ಗ್ರೂಪ್ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸುಮಾರು 300 ಎಕರೆ ಪ್ರದೇಶದಲ್ಲಿ ಉತ್ಪಾದನಾ ಘಟಕ ನಿರ್ಮಾಣವಾಗಲಿದೆ. ಇದಕ್ಕಾಗಿ ಕಂಪನಿ ಸುಮಾರು 700 ಮಿಲಿಯನ್ ಡಾಲರ್ (ಸುಮಾರು 5.7 ಸಾವಿರ ಕೋಟಿ ರೂ.) ಹೂಡಿಕೆ ಮಾಡಲು ಯೋಜಿಸಿದೆ.

ಬೆಂಗಳೂರಿನ ಸಮೀಪ ನಿರ್ಮಾಣವಾಗುತ್ತಿರುವ ಆಪಲ್ ಉತ್ಪಾದನಾ ತಾಣ ಸುಮಾರು 1 ಲಕ್ಷದಷ್ಟು ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ. ಚೀನಾದ ಝೆಂಗ್ಝೌದಲ್ಲಿರುವ ಕಂಪನಿಯ ವಿಶಾಲವಾದ ಉತ್ಪಾದನಾ ಘಟಕದಲ್ಲಿ ಸುಮಾರು 2 ಲಕ್ಷ ಉದ್ಯೋಗಿಗಳಿದ್ದಾರೆ. ಬೆಂಗಳೂರಿನಲ್ಲೂ ಉತ್ಪಾದನೆ ಹೆಚ್ಚಳವಾಗುತ್ತಿದ್ದಂತೆ ಉದ್ಯೋಗಿಗಳ ಸಂಖ್ಯೆಯೂ ಹೆಚ್ಚಲಿದೆ ಎನ್ನಲಾಗಿದೆ. 

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ