ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಐಪಿಎಸ್ ಅಧಿಕಾರಿ ಎಂ.ಎ ಸಲೀಂ ನೇಮಕ

Sampriya

ಶನಿವಾರ, 30 ಆಗಸ್ಟ್ 2025 (17:34 IST)
Photo Credit X
ಬೆಂಗಳೂರು: ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಕಾಂಗ್ರೆಸ್ ಸರ್ಕಾರ ಆದೇಶವನ್ನು ಹೊರಡಿಸಿದೆ.

ಐಪಿಎಸ್ ಅಧಿಕಾರಿ ಡಾ.ಎಂ.ಎ ಸಲೀಂ ಅವರನ್ನು ರಾಜ್ಯ ಪೊಲೀಸ್ ಮುಖ್ಯಸ್ಥರಾಗಿ ನೇಮಿಸುವ ರಾಜ್ಯ ಸರ್ಕಾರದ ನಡೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಆದೇಶ ಹೊರಡಿಸಿದೆ.

ಯುಪಿಎಸ್‌ಸಿಯಿಂದ ಆಯ್ಕೆ ಪಟ್ಟಿ ಬಂದ ಒಂದು ವಾರದೊಳಗೆ ನಿಯಮಿತ ಡಿಜಿಪಿಯನ್ನು ನೇಮಿಸಲಾಗುವುದು ಎಂದು ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು. ಅದರಂತೆ ಇದೀಗ ಹಿರಿಯ ಐಪಿಎಸ್ ಅಧಿಕಾರಿ ಎಂ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

1993 ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿಯಾದ ಡಾ. ಸಲೀಂ ಅವರು ಅಲೋಕ್ ಮೋಹನ್ ನಿವೃತ್ತರಾದ ನಂತರ ಡಿಜಿಪಿ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ