ಸಿಎಂ ಸಿದ್ಧರಾಮಯ್ಯ ಹಿಂದುಳಿದ ವರ್ಗದವರ ಚಾಂಪಿಯನಾ?: ಈಶ್ವರಪ್ಪ ಪ್ರಶ್ನೆ
ಗುರುವಾರ, 30 ಮಾರ್ಚ್ 2017 (11:28 IST)
ಮೈಸೂರು: ಸಿಎಂ ಸಿದ್ಧರಾಮಯ್ಯ ತಾವೊಬ್ಬರೇ ಹಿಂದುಳಿದ ವರ್ಗದವರ ಉದ್ದಾರಕ ಎಂದುಕೊಂಡಿದ್ದಾರೆ. ತಾವೇ ಚಾಂಪಿಯನ್ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ವಿಪಕ್ಷ ನಾಯಕ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು ಸಿಎಂ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋಲುವ ಭೀತಿ ಎದುರಿಸುತ್ತಿದೆ.
ಹಾಗಾಗಿಯೇ ಸಿಎಂ ಸಿದ್ಧರಾಮಯ್ಯ ಮತ್ತೆ ಅಹಿಂದ ಮಂತ್ರ ಜಪಿಸುತ್ತಿದ್ದಾರೆ. ಆದರೆ ಅವರ ತಂತ್ರಗಳೆಲ್ಲಾ ನಡೆಯುವುದಿಲ್ಲ ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ