ಮೇಟಿ ರಾಸಲೀಲೆಯಿಂದ ಬೇಸರಗೊಂಡಿದ್ದಾರಾ ಸಿಎಂ ಸಿದ್ದರಾಮಯ್ಯ?

ಗುರುವಾರ, 15 ಡಿಸೆಂಬರ್ 2016 (11:14 IST)
ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದಿಂದ ಬೇಸರಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಎಲ್ಲ ಪ್ರವಾಸವನ್ನು ರದ್ದು ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರು ಜಿಲ್ಲೆಗೆ ಪ್ರಯಾಣ ಬೆಳೆಸಬೇಕಿತ್ತು. ಆದರೆ, ಮಾಜಿ ಸಚಿವ ಎಚ್.ವೈ.ಮೇಟಿ ರಾಸಲೀಲೆ ಪ್ರಕರಣದಿಂದ ಬೇಸರಗೊಂಡು ತಮ್ಮ ಪ್ರವಾಸವನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ. 
 
ಎಚ್.ವೈ.ಮೇಟಿ ರಾಸಲೀಲೆ ವಿಡಿಯೋ ಸಿಡಿಯನ್ನು ನಿನ್ನೆ ದೆಹಲಿಯಲ್ಲಿ ಆರ್‌ಟಿಐ ಕಾರ್ಯಕರ್ತ ರಾಜಶೇಖರ್ ಮುಲಾಲಿ ಅವರು ಬಿಡುಗಡೆಗೊಳಿಸಿದ್ದರು. ಸಚಿವರ ರಾಸಲೀಲೆ ಸಿಡಿ ಬಿಡುಗಡೆಯಾಗುತಿದ್ದಂತೆ ನೈತಿಕ ಹೊಣೆ ಹೊತ್ತು ಅಬಕಾರಿ ಸಚಿವ ಎಚ್.ವೈ.ಮೇಟಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ