ನಾಳೆ ಬೆಂಗಳೂರು ಹಾಗೂ ರಾಮನಗರ ಬಂದ್ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಅವರು, ಭಾಷೆ, ಜಲ, ರಾಜ್ಯದ ಬಗ್ಗೆ ಅನ್ಯಾಯವಾದ ವೇಳೆ ಸಂಘಟನೆಗಳು ಬಂದ್ ಮಾಡುವುದು ಸಹಜ. ಹೀಗಾಗಿ ಅವರಿಗೆ ನಮ್ಮಿಂದ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಮಳೆ ಬರುವುದಕ್ಕೂ ಸರ್ಕಾರಕ್ಕೂ ಸಂಬಂಧ ಇದೆಯಾ.? ಇದು ನೈರ್ಸಗಿಕ ವಿಕೋಪ.ಕಳೆದ ವರ್ಷ 660 ಟಿಎಂಸಿ ನೀರನ್ನು ತಮಿಳುನಾಡಿಗೆ ಬಿಟ್ಟಿದ್ದೇವೆ. ಈಗ ರಾಜ್ಯದಲ್ಲಿ ಮಳೆ ಇಲ್ಲ. ಈ ಬಗ್ಗೆ ಮಾನಿಟರಿಂಗ್ ವಿಂಗ್ಗೆ ಎಲ್ಲವು ಗೊತ್ತಿದೆ. ಸುಪ್ರೀಂ ಕೋರ್ಟಗೂ ಸಹ ನೀರಿಲ್ಲದಿರುವ ಬಗ್ಗೆ ಮಾಹಿತಿ ಇದ್ದರೂ, ಸ್ಟೇ ನೀಡಿಲ್ಲ. ಪ್ರಧಾನಿಗಳಿಗೆ ಮಾಹಿತಿ ಇದ್ದರೂ, ಮಧ್ಯ ಪ್ರವೇಶ ಮಾಡುತ್ತಿಲ್ಲ. ನೀರಿಗಾಗಿ ಬೊಬ್ಬೊ ಹೊಡೆಯುತ್ತಿರುವ ಬಿಜೆಪಿ ನಾಯಕರು, ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡಬೇಕಿತ್ತು. ಆದರೆ ಆ ಕೆಲಸ ಮಾಡದೇ ಸುಮ್ಮನೆ ಸರ್ಕಾರದ ವಿರುದ್ಧ ಆರೋಪ ಮಾಡ್ತಿದ್ದಾರೆ ಎಂದ್ರು