ಡಿಸಿಸಿ ಬ್ಯಾಂಕ್ ಅವರಪ್ಪಂದಾ…? ಹೆಚ್ ಡಿಕೆ ಹೀಗೆಂದಿದ್ದು ಯಾರಿಗೆ ಗೊತ್ತಾ…?
ಮಂಗಳವಾರ, 19 ಡಿಸೆಂಬರ್ 2017 (17:08 IST)
ಬೆಂಗಳೂರು: ಕಾಂಗ್ರೆಸ್ ಗೆ ವೋಟ್ ಹಾಕಿ ಡಿಸಿಸಿ ಬ್ಯಾಂಕ್ ನಿಂದ ಸಾಲ ಕೊಡಿಸ್ತೀನಿ ಎಂದ ಶಾಸಕ ಕೆ.ಎನ್. ರಾಜಣ್ಣ ಅವರಿಗೆ ಮಾಜಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರ ಸ್ವಾಮಿ ತಿರುಗೇಟು ನೀಡಿದ್ದಾರೆ.
ಕೊರಟಗೆರೆಯಲ್ಲಿ ಕಾಂಗ್ರೆಸ್ ಶಾಸಕ ಕೆ.ಎನ್. ರಾಜಣ್ಣ ಅವರು ಕಾಂಗ್ರೆಸ್ ಗೆ ವೋಟ್ ಹಾಕಿ ಡಿಸಿಸಿ ಬ್ಯಾಂಕ್ ನಿಂದ ಸಾಲ ಕೊಡಿಸ್ತೀನಿ ಎಂದು ಭರವಸೆಯ ಮಾತುಗಳನ್ನು ಜನರಿಗೆ ಹೇಳಿದ್ದಾರೆ. ಇದನ್ನು ಕೇಳಿ ಕೋಪಗೊಂಡ ಹೆಚ್. ಡಿ ಕುಮಾರ ಸ್ವಾಮಿ ಅವರು ಸಾಲ ಪಡೆದು ಕಾಂಗ್ರೆಸ್ ಗೆ ವೋಟ್ ಹಾಕಿ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ಭಾಷಣ ಮಾಡಿದ್ದಾರೆ. ಡಿಸಿಸಿ ಬ್ಯಾಂಕ್ ಅವರಪ್ಪಂದಾ ಎಂದು ಬೆಂಗಳೂರಿನ ಜೆಪಿ ಭವನದಲ್ಲಿ ಹೇಳಿಕೆ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ