ಬೆಂಗಳೂರು : ನಟ ಅಂಬರೀಶ್ ಅವರು ನಿಧನರಾದ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗಿದೆ.
ಇಂದು ಕಂಠೀರವ ಸ್ಟುಡಿಯೋದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂಬರೀಶ್ ಅಂತ್ಯಕ್ರಿಯೆ ಒಕ್ಕಲಿಗ ಸಂಪ್ರದಾಯದಂತೆ ನಡೆಯಲಿದೆ. ಅಂತ್ಯಕ್ರಿಯೆ ವೀಕ್ಷಣೆಗೆ ಸುಮಾರು 6 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗುವುದು. ವಿಐಪಿ ಕಲಾವಿದರು ಸೇರಿ ಸಾರ್ವಜನಿಕರಿಗೆ ಆಸನ ವ್ಯವಸ್ಥೆ ಮಾಡಲಾಗುವುದು. ಕುಟುಂಬದ ವರ್ಗ, ರಾಜಕೀಯ ನಾಯಕರಿಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಗಣ್ಯರಿಗೆ ಪ್ರತ್ಯೇಕ ಒಂದು ಸಾವಿರ ಆಸನಗಳ ವ್ಯವಸ್ಥೆ ಹಾಗೂ ಸಾರ್ವಜನಿಕರಿಗಾಗಿ 5 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗುವುದು.
ಕಂಠೀರವ ಸ್ಟುಡಿಯೋಗೆ 2 ಗೇಟ್ ಗಳ ಮೂಲಕ ಪ್ರವೇಶ ನೀಡಲಾಗುವುದು. ಸಾರ್ವಜನಿಕರಿಗಾಗಿ ಹಿಂಬದಿ ಗೇಟ್ ಮೂಲಕ ಪ್ರವೇಶ ಕಲ್ಪಿಸಲಾಗಿದ್ದು, ಮುಖ್ಯದ್ವಾರದಲ್ಲಿ ವಿಐಪಿಗಳಿಗೆ ಮಾತ್ರ ಪ್ರವೇಶ ನೀಡಲಾಗುವುದು. ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿ 4 ಕಡೆ ಎಲ್ ಇಡಿ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರ ವೀಕ್ಷಣೆಗೆ ಎಲ್ ಇಡಿ ಪರದೆ ಅಳವಡಿಕೆ ಮಾಡಲಾಗುವುದು. ಅಂತ್ಯಕ್ರಿಯೆ ನಡೆಯುವ ಸುತ್ತಮುತ್ತ ಸಿಸಿಟಿವಿ ಅಳವಡಿಕೆ ಮಾಡಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.