ಈಶ್ವರಪ್ಪ ವಿಪಕ್ಷ ನಾಯಕರಾಗಲು ನಾಲಾಯಕ್: ಎಚ್.ಎಂ.ರೇವಣ್ಣ

ಗುರುವಾರ, 16 ನವೆಂಬರ್ 2017 (14:35 IST)
ಹಿರಿಯ ಸಚಿವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವ ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವಿಧಾನಪರಿಷತ್ ವಿಪಕ್ಷ ನಾಯಕರಾಗಲು ನಾಲಾಯಕ್ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
 
ಅಧಿವೇಶನದಲ್ಲಿ ಮಾತನಾಡಿದ ಅವರು, ಹಿರಿಯ ಆರೋಗ್ಯ ಖಾತೆ ಸಚಿವ ರಮೇಶ್ ಕುಮಾರ್‌ರನ್ನು ಕೊಲೆಗಡುಕ ಎನ್ನುತ್ತಾರೆ. ಇತರ ನಾಯಕರ ಬಗ್ಗೆ ಮನಬಂದಂತೆ ವಾಗ್ದಾಳಿ ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿ ನಾಯಕನಾಗಲು ನಾಲಾಯಕ್ ಎಂದು ತಿರುಗೇಟು ನೀಡಿದ್ದಾರೆ.
 
 ಸಿಎಂ ಸಿದ್ದರಾಮಯ್ಯ, ಆರೋಗ್ಯ ಸಚಿವ ರಮೇಶ್ ಕುಮಾರ್, ವೈದ್ಯರೊಂದಿಗೆ ಚರ್ಚೆ ನಡೆಸಲು ಸದಾ ಸಿದ್ದರಾಗಿದ್ದಾರೆ. ಸಮಸ್ಯೆ ಪರಿಹಾರಕ್ಕಾಗಿ ಸರಕಾರ ಸಿದ್ದವಿದೆ.ಆದರೆ, ಬಿಜೆಪಿಯವರು ಪರೋಕ್ಷವಾಗಿ ವೈದ್ಯರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಆರೋಪಿಸಿದರು.
 
ಇಂದು ಸಂಜೆಯ ವೇಳೆಗೆ ಖಾಸಗಿ ವೈದ್ಯರೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತೊಂದು ಸುತ್ತಿನ ಚರ್ಚೆ ನಡೆಸಲಿದ್ದಾರೆ. ವೈದ್ಯರ ಪ್ರತಿಭಟನೆ ಅಂತ್ಯಗೊಳಿಸಲು ಸರಕಾರ ಬದ್ಧವಾಗಿದೆ ಎಂದು ಸಾರಿಗೆ ಖಾತೆ ಸಚಿವ ಎಚ್.ಎಂ.ರೇವಣ್ಣ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ