ಮುಂದಿನ ಚುನಾವಣೆಯಲ್ಲಿ ಈಶ್ವರಪ್ಪ ಅವರಿಗೆ ಟಿಕೆಟ್ ತಪ್ಪುತ್ತಾ?

ಬುಧವಾರ, 14 ಫೆಬ್ರವರಿ 2018 (21:06 IST)

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೈ ತಪ್ಪಲಿದೆ ಎಂದು ಹೇಳಲಾಗಿದೆ.

ಎಸ್.ರುದ್ರೇಗೌಡ ಅವರು ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಶಿವಮೊಗ್ಗ ನಗರ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಪ ಮತಗಳಿಂದ ಸೋತಿದ್ದ ರುದ್ರೇಗೌಡ ಅವರಿಗೇ ಟಿಕೆಟ್ ನೀಡಬೇಕು ಎಂಬ ಒತ್ತಾಯ ಕೇಳಿಬಂದಿದೆ.

ವಿನೋಬನಗರದಲ್ಲಿರುವ ಯಡಿಯೂರಪ್ಪ ಅವರ ನಿವಾಸದಲ್ಲಿ ನಡೆದ ಸಭೆಯಲ್ಲಿ ರುದ್ರೇಗೌಡ ಬೆಂಬಲಿಗರು ಈ ಹಕ್ಕೊತ್ತಾಯ ಮಂಡಿಸಿದ್ದಾರೆ. ಈಶ್ವರಪ್ಪ ಅವರು ಕಳೆದಬಾರಿ ಮೂರನೇ ಸ್ಥಾನ ಪಡೆದಿದ್ದರು. ಆದ್ದರಿಂದ ಅವರು ಸೋಲುವ ಸಾಧ್ಯತೆಯಿದ್ದು, ರುದ್ರೇಗೌಡರಿಗೆ ಟಿಕೆಟ್ ನೀಡಿದರೆ ಗೆಲುವು ಸುಲಭವಾಗಲಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ