ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

Sampriya

ಭಾನುವಾರ, 19 ಅಕ್ಟೋಬರ್ 2025 (12:08 IST)
Photo Credit X
ಬೆಂಗಳೂರು: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕು ಕೇಂದ್ರದಲ್ಲಿ ಇಂದು ನಿಗದಿಯಾಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥಸಂಚಲನಕ್ಕೆ ಸರ್ಕಾರಿ ಅನುಮತಿ ನಿರಾಕರಿಸಿತ್ತು. ಇದರ ವಿರುದ್ಧ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈಗ ಹೈಕೋರ್ಟ್‌ ಮಹತ್ವದ ಸೂಚನೆ ನೀಡಿದೆ. 

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪಥಸಂಚಲನ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ನವೆಂಬರ್​​ 2ರಂದು ಪಥಸಂಚಲನ ನಡೆಸಲು ಅನುಮತಿ ನೀಡಿದೆ. ಅಲ್ಲದೆ, ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. 

ಇಂದು ಪಥ ಸಂಚಲನ ನಡೆಸಲು ಅವಕಾಶ ನೀಡದ ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಜಿಎಸ್ ಕಮಲ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.

ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿ, ಹೈಕೋರ್ಟ್‌ ಅಕ್ಟೋಬರ್​​ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.

ವಿಚಾರಣೆ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿರುವುದರಿಂದ ಹಲವು ಸಂಘಟನೆಗಳು ಒಂದೇ ದಿನ, ಒಂದೇ ಸ್ಥಳ ಮತ್ತು ಒಂದೇ ಮಾರ್ಗದಲ್ಲಿ ರ‍್ಯಾಲಿ ನಡೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದಾರೆ. ಆದ ಕಾರಣ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳಂದು ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್​​ ತಿಳಿಸಿತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ