ಸರಕಾರದ ಜಾಗ ಅಕ್ರಮ ಮಾಡಿಕೊಂಡವರಿಗೆ ಹಕ್ಕು ಪತ್ರ ವಿತರಣೆ

ಶನಿವಾರ, 29 ಫೆಬ್ರವರಿ 2020 (18:49 IST)
ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡು ಸಕ್ರಮೀಕರಣ ಮಾಡಿಕೊಂಡ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ-1964 ನಿಯಮ 94ಸಿ ಮತ್ತು 94ಸಿಸಿ ರನ್ವಯ ಕಲಬುರಗಿ ಜಿಲ್ಲೆಯ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಮನೆ ನಿರ್ಮಿಸಿಕೊಂಡು ಸಕ್ರಮೀಕರಣ ಮಾಡಿಕೊಂಡ ಫಲಾನುಭವಿಗಳಿಗೆ ಕಂದಾಯ ಸಚಿವ ಆರ್. ಅಶೋಕ ಹಕ್ಕು ಪತ್ರಗಳನ್ನು ವಿತರಿಸಿದರು.

ಕಲಬುರಗಿ ನಗರದ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಆಯೋಜಿಸಲಾದ ಹಕ್ಕು ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸಾಂಕೇತಕವಾಗಿ ಹಲವು ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಿ ಮಾತನಾಡಿದ ಸಚಿವರು, ಇಂದಿನಿಂದ ಈ ಜಮೀನು ಸರ್ಕಾರದಲ್ಲ, ಇದು ನಿಮ್ಮ ಸ್ವತ್ತು. ನೆಮ್ಮದಿಯಿಂದ ವಾಸ ಮಾಡಬಹುದು ಎಂದರು.

ಹಕ್ಕು ಪತ್ರ ವಿತರಣೆ ಮಾಡುವುದು, ಖಾತಾ ಮತ್ತು ನೋಂದಣಿ ಸಹ ಫಲಾಭವಿಗಳ ಹೆಸರಿಗೆ ಮಾಡಿಕೊಡಲಾಗುವುದು. ದೀನ ದಲಿತರು ಮತ್ತು ಬಡವರ ಉದ್ಧಾರಕ್ಕಾಗಿ ಸರ್ಕಾರವು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ ಎಂದರು.

ಕಲಬುರಗಿ ಜಿಲ್ಲೆಯ ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ 94ಸಿ ಮತ್ತು 94ಸಿಸಿ ಪ್ರಕರಣಗಳಲ್ಲಿ 3580 ಫಲಾನುಭವಿಗಳಿಗೆ ಮನೆಗಳ ಹಕ್ಕು ಪತ್ರ ವಿತರಣೆಗೆ ಆಯ್ಕೆ ಮಾಡಲಾಗಿದ್ದು, ಸುಮಾರು 1250 ಜನರಿಗೆ ಇಲ್ಲಿ ಹಕ್ಕುಪತ್ರ ವಿತರಣೆ ಮಾಡಲಾಯಿತು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ