ಡಾ.ಜಿ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆ ಹಾಗೂ ನಿವಾಸದ ಮೇಲೆ ಐಟಿ ದಾಳಿ

ಗುರುವಾರ, 10 ಅಕ್ಟೋಬರ್ 2019 (11:02 IST)
ಬೆಂಗಳೂರು : ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ  ಶಿಕ್ಷಣ ಸಂಸ್ಥೆ ಹಾಗೂ ಮನೆಯ ಮೇಲೆ ಬೆಳ್ಳಂಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ನಗರದ ಮರಳೂರಿನಲ್ಲಿರೋ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ಹಾಗೂ ಡಿಗ್ರಿ ಕಾಲೇಜುಗಳ ಮೇಲೆ ಬೆಂಗಳೂರು ಐಟಿ ಸೆಲ್ ಅಧಿಕಾರಿಗಳಿಂದ ಇಂದು ಬೆಳಿಗ್ಗೆ ದಾಳಿ ನಡೆಸಿ,  ಶಿಕ್ಷಣ ಸಂಸ್ಥೆಯಲ್ಲಿ ದಾಖಲೆಗಳ ಪರಿಶೀಲನೆ ಮಾಡಿದ್ದಾರೆ.


ಅಲ್ಲದೇ ಬೆಂಗಳೂರಿನ ಸದಾಶಿವನಗರದಲ್ಲಿರುವ ಪರಮೇಶ್ವರ್ ಅವರ ನಿವಾಸದ ಮೇಲೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ನಮ್ಮ ಸಂಸ್ಥೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಲಿ. ನನಗೆ ಸಂತೋಷ. ನಮ್ಮಲ್ಲಿಯೂ ತಪ್ಪುಗಳಿದ್ದರೆ ಇದರಿಂದ ತಿಳಿಯುತ್ತೆ ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ