ರಾಮನಗರ ಆಯಿತು, ಈಗ ಮತ್ತೊಂದು ಪ್ರದೇಶದ ಹೆಸರು ಬದಲಾವಣೆಗೆ ಮುಂದಾದ ಸರ್ಕಾರ

Sampriya

ಮಂಗಳವಾರ, 20 ಆಗಸ್ಟ್ 2024 (20:21 IST)
Photo Courtesy X
ಬೆಂಗಳೂರು: ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಎಲೆಕ್ಟ್ರಾನಿಕ್ ಸಿಟಿ ಹೆಸರು ಬದಲಾವಣೆಗೆ ಮುಂದಾಗಿದೆ.

ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ   ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್‌ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ. ಎಲೆಕ್ಟ್ರಾನಿಕ್‌ ಸಿಟಿಯ ಹೆಸರನ್ನು ಬದಲಿಸುವುದಾಗಿ ಅವರು ಘೋಷಣೆ ಮಾಡಿದ್ದಾರೆ.

ಅಲ್ಲದೆ ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಈಚೆಗೆ ಮರುನಾಮಕರಣ ಮಾಡಲಾಯಿತು. ವಿಪಕ್ಷಗಳ ವಿರೋಧದ ನಡುವೆಯೂ ಕಾಂಗ್ರೆಸ್ ಸರ್ಕಾರ ಈ ನಿರ್ಧಾರವನ್ನು ಘೋಷಣೆ ಮಾಡಿತು. ಇದಕ್ಕೆ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ತೀವ್ರ ವಿರೋಧವನ್ನು ವ್ಯಕ್ತಪಡಿಸಿದರು. ಅದಲ್ಲದೆ ಬಿಜೆಪಿ ನಾಯಕರು ಕಾಂಗ್ರೆಸ್‌ನವರಿಗೆ ರಾಮನ ಹೆಸರಿನಲ್ಲಿ ಸಮಸ್ಯೆ ಇರುವುದು ಎಂದು ಆಕ್ರೋಶ ಹೊರಹಾಕಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ