ಐಟಿ, ಇಡಿ, ಸಿಬಿಐ ವಿರುದ್ಧ ಸಿಡಿದೆದ್ದ ಕೈ ಪಡೆ

ಶನಿವಾರ, 12 ಅಕ್ಟೋಬರ್ 2019 (18:48 IST)
ಕಾಂಗ್ರೆಸ್ ನಾಯಕರ ಮೇಲೆ ಕೇಂದ್ರ ಸರಕಾರವು ರಾಜಕೀಯ ದುರುದ್ದೇಶದಿಂದ ಇಡಿ, ಐಟಿ ಮತ್ತು ಸಿಬಿಐ ತನಿಖೆ ನಡೆಸಿ ಮಾನಸಿಕವಾಗಿ ಕಿರುಕುಳ ನೀಡಲಾಗುತ್ತಿದೆ. ಹೀಗಂತ ಆರೋಪಿಸಿ ಕೈ ಪಡೆ ಪ್ರತಿಭಟನೆ ನಡೆಸಿದೆ.

ಮಂಡ್ಯ ಕೃಷ್ಣರಾಜಪೇಟೆಯಲ್ಲಿ  ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು, ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

ಮೈಸೂರು - ಚನ್ನರಾಯಪಟ್ಟಣ ಮುಖ್ಯ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ರು. ಕೆಯುಐಡಿಎಫ್ ಸಿ ಮಾಜಿ ಅಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್ ನೇತೃತ್ವದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ರು.  ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದ್ರು. ಗೃಹಸಚಿವ ಅಮಿತ್ ಷಾ ಅವರ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಮತ್ತು ಪಿ.ಚಿದಂಬರಂ ಅವರ ವಿರುದ್ಧ ಈಗಾಗಲೇ ಸೇಡಿನ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ, ಪ್ರಸ್ತುತ ಡಾ.ಜಿ.ಪರಮೇಶ್ವರ ಮತ್ತು ಮಾಜಿ ಸಚಿವ ಆರ್.ಎಲ್.ಜಾಲಪ್ಪ ಅವರ ಮೇಲೆ ಐಟಿ ದಾಳಿ ನಡೆಸಿದೆ. ಮಾನಸಿಕವಾಗಿ ಕಿರುಕುಳ ನೀಡಿ ಸಮಾಜದ ಮುಂದೆ ಕೆಟ್ಟ ಹೆಸರು ತರಲು ಸಂಚು ನಡೆಸಿದ್ದಾರೆ ಅಂತ ದೂರಿದ್ರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ