ನೀರು ಹರಿಸಿದರೆ ರೈತರಿಗೆ ಅನ್ಯಾಯ ಮಾಡಿದಂತೆ

ಗುರುವಾರ, 14 ಸೆಪ್ಟಂಬರ್ 2023 (16:00 IST)
ರಾಜ್ಯ ಸರ್ಕಾರ ಈಗಾಗಲೇ ತಮಿಳುನಾಡಿಗೆ ಸಾಕಷ್ಟು ನೀರು ಹರಿಸಿದೆ. ಡ್ಯಾಂನಲ್ಲಿ ನೀರು ಇಲ್ಲದಂತೆ ಮಾಡಿಟ್ಟಿದೆ’ ಅಂತಾ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು. ಗದಗನಲ್ಲಿ ಮಾತ್ನಾಡಿದ ಅವರು, ‘15 ದಿನಗಳ ಕಾಲ ಪ್ರತಿದಿನ 10 ಸಾವಿರ ಕ್ಯುಸೆಕ್‌ ಹಾಗೂ ಮುಂದಿನ 15 ದಿವಸ 5 ಸಾವಿರ ಕ್ಯುಸೆಕ್‌ ನೀರು ಹರಿಸಿದ್ದಾರೆ. ಹೀಗಾಗಿ, ಕುಡಿಯಲು ಸಹ ನೀರು ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಸೆ.12ರ ನಂತರ ನೀರು ಹರಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ. ಸರ್ವಪಕ್ಷದ ಸಭೆಯಲ್ಲೂ ನೀರು ಬಿಡಲ್ಲ ಅನ್ನೋ ನಿರ್ಣಯ ತೆಗೆದುಕೊಳ್ಳಲಾಗಿದೆ. ಸರ್ಕಾರ ಇದಕ್ಕೆ ಬದ್ಧವಾಗಿರಬೇಕು. ಆಕಸ್ಮಾತ್‌ ನೀರು ಬಿಟ್ಟಿದ್ದೇ ನಿಜವಾದರೆ ಕಾವೇರಿ ಜಲಾನಯನ ಪ್ರದೇಶದ ರೈತರು ಹಾಗೂ ಜನರಿಗೆ ಸರ್ಕಾರ ದೊಡ್ಡ ಅನ್ಯಾಯ ಮಾಡಿದಂತೆ ಆಗುತ್ತದೆ’ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ