ಅದು ನಾಯಿ ಮಾಂಸ ಅಲ್ಲ, ಮೇಕೆ ಮಾಂಸ: ಜಿ ಪರಮೇಶ್ವರ್ ಸ್ಪಷ್ಟಣೆ

Sampriya

ಭಾನುವಾರ, 28 ಜುಲೈ 2024 (17:09 IST)
Photo Courtesy X
ಬೆಂಗಳೂರು: ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ಸಾಗಾಟವಾಗಿದ್ದು, ನಾಯಿ ಮಾಂಸ ಅಲ್ಲ, ಮೇಕೆಯ ಮಾಂಸ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಮಾಂಸದ ಮಾದರಿಯನ್ನು ಪರೀಕ್ಷಿಸಿದಾಗ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ.

ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು.

ಈಚೆಗೆ ಬೆಂಗಳೂರಿನಲ್ಲಿ ಕುರಿ ಮಾಂಸದ ಜತೆಗೆ ನಾಯಿ ಮಾಂಸಗಳನ್ನು ಮಾರಾಟ ಮಾಡಲಾಗುತ್ತಿದ್ದೆ. ಹಾಗಾಗಿ ರಾಜಸ್ಥಾನದಿಂದ ಭಾರೀ ಪ್ರಮಾಣದಲ್ಲಿ ನಾಯಿಯ ಮಾಂಸವನ್ನು ರಜಾಕ್ ಸಾಗಿಸುತ್ತಿದ್ದಾನೆ ಎಂದು ಪುನೀತ್ ಕೆರೆಹಳ್ಳಿ ಗಂಭೀತ ಆರೋಪ ಮಾಡಿದ್ದರು. ಅದರಂತೆ ಮಾಂಸದ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದೀಗ ಅದರ ವರದಿ ಬಂದಿದ್ದು, ಅದು ಮೇಕೆ ಮಾಂಸ ಎಂದು ದೃಢಪಟ್ಟಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ