ಬೆಳ್ಳಂ ಬೆಳಿಗ್ಗೆ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ಗೆ ಐಟಿ ಅಧಿಕಾರಿಗಳ ಶಾಕ್

ಗುರುವಾರ, 9 ಫೆಬ್ರವರಿ 2017 (10:16 IST)
ಬೆಂಗಳೂರು: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜ್ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
 

ಬೆಂಗಳೂರಿನ ಗರುಡಾಚಾರ್ ಪಾಳ್ಯದಲ್ಲಿರುವ ಶಾಸಕರ ನಿವಾಸ ಹಾಗೂ ಅವರ ಸಂಬಂಧಿಕರ ನಿವಾಸಗಳ ಮೇಲೆ ಏಕಕಾಲದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಮತ್ತು ಅಕ್ರಮ ಆಸ್ಥಿ ಕುರಿತಾಗಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಸಕ ನಾಗರಾಜ್ ರಾಜಕಾರಣವಲ್ಲದೆ, ಹಲವು ಉದ್ಯಮಗಳನ್ನು ನಡೆಸುತ್ತಿದ್ದಾರೆ. ರಿಯಲ್ ಎಸ್ಟೇಟ್,  ಚೌಲ್ಟ್ರಿ ಮುಂತಾದ ವ್ಯವಹಾರ ನಡೆಸುತ್ತಿದ್ದಾರೆ. ಇವುಗಳ ಲೆಕ್ಕಪತ್ರಗಳನ್ನು ಅಧಿಕಾರಿಗಳು ಕಲೆ ಹಾಕಿ ಪರಿಶೀಲನೆ ನಡೆಸುತ್ತಿದ್ದಾರೆ.  ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಹೊರಬೀಳಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ