ಪುತ್ರಿಯ ಅದ್ಧೂರಿ ವಿವಾಹ: ಗಾಲಿ ಜನಾರ್ದನ ರೆಡ್ಡಿಗೆ ಐಟಿ ನೋಟಿಸ್

ಸೋಮವಾರ, 21 ನವೆಂಬರ್ 2016 (18:29 IST)
ಮೊನ್ನೆಯಷ್ಟೆ ಪುತ್ರಿಯ ಅದ್ಧೂರಿ ವಿವಾಹ ಮಾಡಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ.
 
ಬಳ್ಳಾರಿಯಲ್ಲಿರುವ ಜನಾರ್ದನ್ ರೆಡ್ಡಿ ನಿವಾಸದ ಮೇಲೆ ದಾಳಿ ನಡೆಸಿದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಒಂದು ಸೂಟ್‌ಕೇಸ್‌ನಷ್ಟು ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಇದ್ದಕ್ಕೂ ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ರೆಡ್ಡಿ ಒಡೆತನದ ಒಎಂಸಿ ಹಾಗೂ ಎಎಂಸಿ ಕಚೇರಿಯ ಮೇಲೆ ದಾಳಿ ನಡೆಸಿದ್ದರು. 
 
ನವೆಂಬರ್ 25 ರೊಳಗೆ ತಮ್ಮ ಪುತ್ರಿಯ ಅದ್ಧೂರಿ ವಿವಾಹದ ಲೆಕ್ಕವನ್ನು ತೋರಿಸುವಂತೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ಜನಾರ್ದನ್ ರೆಡ್ಡಿ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ ಎನ್ನಲಾಗಿದೆ. 
 
ಕಪ್ಪು ಹಣದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಸಮರಸಾರಿದ್ದ ಬೆನ್ನಲ್ಲೆ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸುಮಾರು 500 ಕೋಟಿ ರೂಪಾಯಿ ವೆಚ್ಚದಲ್ಲಿ ತಮ್ಮ ಪುತ್ರಿಯ ವಿವಾಹವನ್ನು ಮಾಡಿದ್ದರು. ಈ ಅದ್ದೂರಿ ವಿವಾಹ ರಾಜ್ಯ ಸಭೆ ಹಾಗೂ ಲೋಕಸಭೆಯಲ್ಲಿ ಚರ್ಚೆಗೂ ಸಹ ಬಂದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ