"ಇದು ಮುಳುಗುತ್ತಿರುವ ಬೆಂಗಳೂರಲ್ಲ, ತೇಲುತ್ತಿರುವ ಬೆಂಗಳೂರು"

Sampriya

ಸೋಮವಾರ, 21 ಅಕ್ಟೋಬರ್ 2024 (18:30 IST)
Photo Courtesy X
ಬೆಂಗಳೂರು: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಬೆಂಗಳೂರಿನ ಹಲವೆಡೆ ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ.

ಇಂದು ವಿಪಕ್ಷ ನಾಯಕ ಆರ್‌ ಅಶೋಕ್ ಅವರು ಸಿಲ್ಕ್ ಬೋರ್ಡ್ ಜಂಕ್ಷನ್ ಸುತ್ತಮುತ್ತ ಮಳೆಯಿಂದಾಗಿ ಸಾರ್ವಜನಿಕರಿಗೆ ಉಂಟಾಗಿರುವ ಸಮಸ್ಯೆ ಮತ್ತು ರಾಜ ಕಾಲುವೆಗಳನ್ನು ಖುದ್ದಾಗಿ ವೀಕ್ಷಿಸಿ, ಅಧಿಕಾರಿಗಳೊಂದಿಗೆ ಸಮಸ್ಯೆಗಳ ಪರಿಹಾರದ ಕುರಿತು ಚರ್ಚೆ ನಡೆಸಿದರು.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅಶೋಕ್ ಅವರು, ಕಾಂಗ್ರೆಸ್ ಸರ್ಕಾರ ಸರಿಯಾದ ರೀತಿಯಲ್ಲಿ ಕಳೆದ 16 ತಿಂಗಳಿನಿಂದ ರಾಜಕಾಲುವೆಗಳನ್ನು ನಿರ್ವಹಣೆ ಮಾಡದೇ ಇರುವುದರಿಂದ ಬೆಂಗಳೂರಿನಾದ್ಯಂತ ಹೆಚ್ಚಿನ ಸಮಸ್ಯೆ ಉಂಟಾಗಿದೆ ಎಂದು ಗಂಭೀರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಶ್ರೀ ಸತೀಶ್ ರೆಡ್ಡಿ, ಶ್ರೀ ಡಾ.ಅಶ್ವಥ್‌ ಸಿಎನ್‌ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ