ಇನ್ನು ಮೂರು ದಿನ‌ ಮಳೆ

ಸೋಮವಾರ, 2 ಮೇ 2022 (19:34 IST)
ಉತ್ತರ ಭಾರತದಲ್ಲಿ ದಾಖಲೆಯ ಬಿಸಿಲು, ಬಿಸಿ ಗಾಳಿಯಿಂದ ಜನ ತತ್ತರಿಸಿದ್ದು, ರಾಜ್ಯದ ಹಲವೆಡೆ ಭಾರಿ ಮಳೆ ಅವಾಂತರ ಸೃಷ್ಟಿಸಿದೆ.
 
ಭಾನುವಾರ ಗುಡುಗು ಸಿಡಿಲು ಸಹಿತ ಜೋರು ಮಳೆಯಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಗೆ ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.ಮುಂದಿನ ಮೂರುದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಕೊಪ್ಪಳ, ಯಾದಗಿರಿ, ಬೆಳಗಾವಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ