ರೇವಣ್ಣನ ಆಪ್ತನಿಗೆ ಐಟಿ ಶಾಕ್

ಬುಧವಾರ, 12 ಫೆಬ್ರವರಿ 2020 (11:05 IST)
ಹಾಸನ : ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್.ಡಿ.ರೇವಣ್ಣನ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ರೇವಣ್ಣನ ಆಪ್ತ ಶಿವಕುಮಾರ್ ಅವರ ಹಾಸನ ನಗರದ ಸಂಗಮೇಶ್ವರ ಬಡಾವಣೆಯಲ್ಲಿರುವ ಮನೆಯ ಮೇಲೆ ಐಟಿ ಅಧಿಕಾರಿಗಳು ನಿನ್ನೆ ಬೆಳಿಗ್ಗೆ 8 ಗಂಟೆಗೆ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಇಂದು ಹಾಸನದ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದಾರೆ.


ಕಳೆದ ಲೋಕಸಭಾ ಚುನಾವಣೆಯ ವೇಳೆಯೂ ರೇವಣ್ಣನ ಆಪ್ತರ ಮನೆ ಮೇಲೆ ಐಟಿ ದಾಳಿ ನಡೆಸಲಾಗಿತ್ತು. ಇದೀಗ ಮತ್ತೊಮ್ಮೆ ರೇವಣ್ಣನ ಆಪ್ತನ ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ